ಬಜಪೆ: ಬಜಪೆ ಶ್ರೀ ಶಾರದೋತ್ಸವ ಸಮಿತಿಯ ಆಶ್ರಯದಲ್ಲಿ 24ನೇ ವರ್ಷದ ಶ್ರೀ ಶಾರದೋತ್ಸವ ಅ.8 ಶನಿವಾರ ಸಾಂಪ್ರದಾಯಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭಗೊಂಡಿತು.


ಶ್ರೀ ಶಾರದಾಮಾತೆಯ ಮೂರ್ತಿಯನ್ನು ಬಜಪೆ ಶ್ರೀ ವಿಜಯ ವಿಠಲ ಭಜನಾ ಮಂದಿರದಿಂದ ಮೆರವಣಿಗೆಯಲ್ಲಿ ತಂದು ಗಣಹೋಮ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳ ಬಳಿಕ ಪ್ರತಿಷ್ಠೆ ಮಾಡಲಾಯಿತು. ಶಿಬರೂರು ಅನಂತಪದ್ಮನಾಭ ಆಚಾರ್ಯ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು.

ಸಮಿತಿಯ ಅಧ್ಯಕ್ಷ ಪ್ರದೀಪ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಕೃಷ್ಣರಾಜ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಬಳಿಕ ನಿರಂತರ ಭಜನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಲಾುತು.
