ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟರ್ಸ್ ದರ್ಖಾಸು ನಿವಾಸಿ, ಪ್ರಗತಿಪರ ಕೃಷಿಕ ಕೈತ್ರೋಡಿ ಬಾಬು ಸಪಲ್ಯ (70) ಇವರು ಅಸೌಖ್ಯದಿಂದ ಗುರುವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರಿಗೆ ಪತ್ನಿ ಸಹಿತ ಮೂವರು ಪುತ್ರರು ಮತ್ತು ಪುತ್ರಿ ಇದ್ದಾರೆ. ಕಳೆದ 35 ವರ್ಷಗಳಲ್ಲಿ ಮೇಸ್ತ್ರಿಯಾಗಿ ಬಳಿಕ ಗುತ್ತಿಗೆದಾರರಾಗಿ ಗುರುತಿಸಿಕೊಂಡಿದ್ದ ಇವರು ಪ್ರಾಮಾಣಿಕತೆ ಮತ್ತು ಗುಣಮಟ್ಟದ ಕೆಲಸದಿಂದಲೇ ಜನಪ್ರಿಯರಾಗಿದ್ದರು. ಕಳೆದ 10 ವರ್ಷಗಳಿಂದ ಪ್ರಗತಿಪರ ಕೃಷಿಕರಾಗಿ ಗುರುತಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ ಮನೆ ಸಮೀಪದಲ್ಲಿ ನೆರವೇರಿತು.

