ಬಂಟ್ವಾಳ: ಇದೇ 6ರಂದು ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ವಿಜಯ ದಿನ ಪ್ರಯುಕ್ತ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಪೊಳಲಿ ವಿವೇಕ ಚೈತನ್ಯಾನಂದ ಸ್ವಾಮೀಜಿ ಅರ್ಶೀವಚನ ನೀಡಲಿದ್ದು, ಹಿಂದೂ ಜಾಗರಣ ವೇದಿಕೆ ದಕ್ಷಿಣ ಪ್ರಾಂತ ಸಂಚಾಲಕ ಕೆ.ಟಿ.ಉಲ್ಲಾಸ್ ದಿಕ್ಸೂಚಿ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

