ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ಎನ್.ಸಿ.ಸಿ. ವಿದ್ಯಾರ್ಥಿಗಳಿಂದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಮೇಜರ್ ರಾಧಾಕೃಷ್ಣ ಶೆಟ್ಟಿಯವರ ನೇತೃತ್ವದಲ್ಲಿ ಕೊಡಂಗಲ್ಲಿನ ಮಹಮ್ಮಾಯಿ ದೇವಸ್ಥಾನದ ವಠಾರವನ್ನು ಸ್ವಚ್ಛಗೊಳಿಸಲಾಯಿತು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಫ್ರೊ. ಹರೀಶ್ ಮತ್ತು ಆಂಗ್ಲ ಭಾಷಾ ಉಪನ್ಯಾಸಕ ಸಂದೀಪ್ ಶೆಟ್ಟಿ ಉಪಸ್ಥಿತರಿದ್ದರು.
