ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಶ್ರೀಮಹಾವೀರ ಜಯಂತಿ ದಿನಾಚರಣೆಯು ಏ.18ರಂದು ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಭವನದಲ್ಲಿ ಸಂಜೆ 4 ಗಂಟೆಯಿಂದ ನಡೆಯಲಿದೆ. ಮೂಡುಬಿದಿರೆ ಶ್ರೀ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಶ್ರೀಕ್ಷೇತ್ರ ಧರ್ಮಸ್ಥಳದ ಹೇಮಾವತಿ ವಿ.ಹೆಗ್ಗಡೆ, ಮೂಡುಬಿದಿರೆ ಶಾಸಕ ಕೆ.ಅಭಯಚಂದ್ರ ಜೈನ್, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ, ಚೌಟರ ಅರಮನೆಗೆ ಕುಲದೀಪ್ ಎಂ. ಮುಖ್ಯ ಅತಿಥಿಯಾಗಿರುವರು.ಅಷ್ಟವಿಧಾರ್ಚನೆ, ಆಳ್ವಾಸ್ ವಿದ್ಯಾರ್ಥಿಗಳಿಂದ ಜಿನ ಆರಾಧನಾ ಗೀತೆಗಳು ನಡೆಯಲಿರುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ತಿಳಿಸಿದ್ದಾರೆ.
