ಬಂಟ್ವಾಳ:ತಾಲ್ಲೂಕಿನ ಕಾವಳಮೂಡೂರು ಗ್ರಾಮದ ಎನ್.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹೇಂದ್ರ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಗಾಯಾಳುಗಳನ್ನು ಸ್ಥಳೀಯ ನಿವಾಸಿಗಳಾದ ಬೈಕ್ ಸವಾರ ಜಯಪ್ರಕಾಶ್ ಮತ್ತು ಸಹಸವಾರ ರಾಕೇಶ್ ಎಂದು ಗುರುತಿಸಲಾಗಿದೆ. ಇವರು ಮಡಂತ್ಯಾರು ಕಡೆಯಿಂದ ಮಂಗಳವಾರ ಮಧ್ಯಾಹ್ನ ಬಿ.ಸಿ.ರೋಡ್ ಕಡೆಗೆ ಹೋಗುತ್ತಿದ್ದ ವೇಳೆ ಬಿ.ಸಿ.ರೋಡ್ ಕಡೆಯಿಂದ ಬರುತ್ತಿದ್ದ ಜೀಪು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಕೂಡಾ ರಸ್ತೆಗೆ ಉರುಳಿ ಬಿದ್ದು ತಲೆ ಮತ್ತು ಕೈಕಾಲು ಸಹಿತ ಬೆನ್ನಿಗೆ ಗಂಭೀರ ಗಾಯಗೊಂಡು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪುಂಜಾಲಕಟ್ಟೆ ಠಾಣೆ ಪೊಲೀಸರು ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *