ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ ಬಂಟ್ವಾಳ, ಅರಣ್ಯ ಇಲಾಖೆ ಬಂಟ್ವಾಳ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಬಂಟ್ವಾಳ , ಎನ್.ಎಸ್.ಎಸ್ ಘಟಕ ಹಾಗೂ ಇಕೋ ಕ್ಲಬ್‍ನ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ಮತ್ತು ವನಮಹೋತ್ಸವ ಕಾರ್ಯ ಕ್ರಮ ನಡೆಯಿತು. ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್ ಸಿ ನ್ಯಾಯಧೀಶ ಚಂದ್ರಶೇಖರ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು .DSC_2673

ಬಳಿಕ ಮಾತನಾಡಿದ ಅವರು ಪರಿಸರದ ಕಾಳಜಿ ಮತ್ತು ಸಂರಕ್ಷಣೆಯ ಕೆಲಸ ಮಾಡಬೇಕಾದ ಅಗತ್ಯವಾದ ಕಾಲಘಟ್ಟದಲ್ಲಿ ನಾವಿದ್ದೇವೆ. ಎಲ್ಲರೂ ಕೈಜೋಡಿಸಿದಾಗ ಮಾತ್ರ ಪರಿಸರದ ಸಂರಕ್ಷಣೆ ಸಾಧ್ಯ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಸಮೂಹ ರಾಷ್ಟ್ರಕ್ಕೆ ಕೊಡುಗೆ ನೀಡುವ ಕೆಲಸದಲ್ಲಿ ನಿರತರಾಗಬೇಕು ಎಂದು ಹೇಳಿದರು. ಪ್ರಧಾನ ಸಿವಿಲ್ ನ್ಯಾಯಧೀಶ ಪ್ರಕಾಶ್ ಸಿಡಿ ಮಾತನಾಡಿ ವಿದ್ಯಾರ್ಥಿಗಳು ಪ್ರಮುಖವಾಗಿ ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ದೂರವಿರಿ ಅಮೂಲಕ ಪರಿಸರ ಸಂರಕ್ಷಣೆ ಮಾಡಿ ಎಂದು ತಿಳಿಸಿದರು.

ವೇದಿಕೆಯಲ್ಲಿ ವಲಯ ಅರಣ್ಯಾಧಿಕಾರಿ ಸುರೇಶ್ ಬಿ. ವಕೀಲರ ಸಂಘದ ಅಧ್ಯಕ್ಷ ವೆಂಕಟರಮಣ ಶೆಣೈ, ಸರಕಾರಿ ವಕೀಲರಾದ ಸತೀಶ್ ಕುಮಾರ್, ಬಾರ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಅಶ್ವಿನ್ ಕುಮಾರ್ ರೈ, ವಕೀಲರ ಸಂಘದ ಉಪಾಧ್ಯಕ್ಷ ಸುರೇಶ್ ನಾವೂರು, ವಕೀಲರಾದ ಶೈಲಜಾರಾಜೇಶ್, ವಿನೋದ ಎಸ್, ಉಪ ವಲಯ ಅರಣ್ಯಾಧಿಕಾರಿ ಪ್ರೀತಂ, ಅರಣ್ಯ ರಕ್ಷಕರಾದ ವಿನಯಕುಮಾರ್ , ರವಿಕುಮಾರ್, ಸಿಬ್ಬಂದಿಗಳಾದ ಭಾಸ್ಕರ, ಜಯರಾಮ, ಎನ್.ಎಸ್.ಎಸ್ ನ ಸಂಯೋಜಕ ಬಾಲಕೃಷ್ಣ ನಾಯ್ಕ ಬೆಳ್ಳಾರೆ ಮತ್ತು ಇಕೋ ಕ್ಲಬ್ ನ ಮಾರ್ಗದರ್ಶಕಿ ಲವೀನಾ ಶಾಂತಿ ಲೋಬೋ ಉಪಸ್ಥಿತರಿದ್ದರು.

ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಯೂಸುಫ್ ಸ್ವಾಗತಿಸಿ ,ಪ್ರಧಾನ ಕಾರ್ಯದರ್ಶಿ ರಾಜಾರಾಮ್ ನಾಯಕ್ ವಂದಿಸಿದರು ಶಿಕ್ಷಕ ಅಬ್ದುಲ್ ರಝಾಕ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *