ವಾಮಂಜೂರು: ಎಸ್ ಡಿ ಎಂ ಮಂಗಳಜ್ಯೋತಿ ಸಮಗ್ರ ಶಾಲೆಯ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆಯು ಜೂ. 24 ರಂದು ಜರಗಿತು. ಕಾರ್ಯಕ್ರಮವನ್ನು ದಿಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ದಾಸ್ ಕನ್ಸ್‍ಟ್ರಕ್ಷನ್ಸ್ ಇದರ ಮಾಲೀಕರಾದ  ಮೋಹನ ದಾಸ್ ಶೆಟ್ಟಿ ಇವರು ಮಾತನಾಡುತ್ತಾ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹೆಚ್ಚಿಸಲು ಶಾಲೆಗಳಲ್ಲಿ ವಿದ್ಯಾರ್ಥಿ ಸರಕಾರಗಳು ಅತೀ ಅಗತ್ಯ  ಮಕ್ಕಳಲ್ಲಿ ನಾಯಕತ್ವದ ಗುಣಗಳನ್ನು ಶಾಲಾ ಹಂತದಲ್ಲೇ ಬೆಳೆಸಬೇಕು, ವಿದ್ಯಾರ್ಥಿಗಳಿಗ, ಸರಕಾರವನ್ನು ನಡೆಸುವ ರೀತಿ, ಮಂತ್ರಿಗಳ ಜವಾಬ್ದಾರಿ ಮತ್ತು ಜನರೊಂದಿಗೆ ಬೆರೆಯುವ ಗುಣ ನಾಯಕನಾಗಿ ಮಾಡಬೇಕಾದ ಕರ್ತವ್ಯವನ್ನು ವಿದ್ಯಾರ್ಥಿ ಜೀವನದಲ್ಲಿ ಬೆಳೆಸಿದರೆ ಗಾಂಧೀಜಿ ಕಂಡ ರಾಮರಾಜ್ಯದ ಕನಸು ನನಸಾಗಿ ಭಾರತ ವಿಶ್ವ ಮಾನ್ಯವಾಗುವುದು ಎಂದರು.

20170624_103429

ವಿಕಲ ಚೇತನರ ವಿಶೇಷ ಮಾಹಿತಿ ಕೈಪಿಡಿಯನ್ನು ಸಂಸ್ಥೆಗೆ ಹಸ್ತಾಂತರಿಸಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಮಂಗಳೂರು ಇದರ ಚೇರ್‍ಮ್ಯಾನ್, ಸಿ ಎ ಶಾಂತಾರಾಮ ಶೆಟ್ಟಿ ಇವರು ಮಾತನಾಡಿ ವಿಕಲಚೇತನ ಮಕ್ಕಳಿಗೆ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಅರಿವಿನ ಕೊರತೆಯಿಂದಾಗಿ ಸರಕಾರದ ಸವಲತ್ತುಗಳಿಂದ ವಂಚಿತರಾಗುತ್ತಾರೆ, ದಿವ್ಯಾಂಗರು ತಮ್ಮ ಹಕ್ಕುಗಳ ಬಗ್ಗೆ ತಿಳಿದಾಗ ಅವರ ಅಭಿವೃದ್ಧಿಯಾಗುತ್ತದೆ ಎಂದರು.

20170624_103732

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ದಕ್ಷಿಣ ಕನ್ನಡ ಇದರ ವಿಕಲಚೇತನರ ಉಪಸಮಿತಿಯ ಅಧ್ಯಕ್ಷರಾದ  ದಯಾನಂದ ಶೆಟ್ಟಿ ಇವರು ಮಾತನಾಡಿ ವಿಕಲಚೇತನರ ಬಗ್ಗೆ ಸಾಮಾನ್ಯ ಜನರು ಮಾನವೀಯತೆಯನ್ನು ತೋರಬೇಕು ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತಾಧಿಕಾರಿ ಗಣೇಶ್ ಭಟ್ ವಹಿಸಿದ್ದರು. ವೇದಿಕೆಯಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿ ನಾಯಕ ವಿಘ್ನೇಶ್ ಹಾಗೂ ಪ್ರಾಥಮಿಕ ವಿದ್ಯಾರ್ಥಿ ನಾಯಕಿ ಕುಮಾರಿ ಕೀರ್ತಿ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯಸ್ಥರಾದ ಶ್ರೀ ಅಶೋಕ್ ಕುಮಾರ್ ಅವರು ಸ್ವಾಗತಿಸಿ ವಿದ್ಯಾರ್ಥಿ ಸರಕಾರದ ಮಂತ್ರಿಗಳಿಗೆ ಪ್ರಮಾಣ ವಚನ ಭೋದಿಸಿದರು, ಪ್ರಾಥಮಿಕ ಶಾಲಾ ಮುಖ್ಯಸ್ಥರಾದ ಶ್ರೀಮತೀ ಮಾರ್ಯೆಟ್ ಮಸ್ಕರೇನಸ್ ಧನ್ಯವಾದವನ್ನು ಸಮರ್ಪಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಶೇಖರ್ ಕಡ್ತಲ ಕಾರ್ಯಕ್ರಮ ನಿರ್ವಹಿಸಿದರು.

By Suddi9

Leave a Reply

Your email address will not be published. Required fields are marked *