ಬಂಟ್ವಾಳ: ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕಾರ ಹಾಗೂ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡಿರುವ ಬಗ್ಗೆ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣವಾದ ವಾಟ್ಸಪ್‍ನಲ್ಲಿ ತನ್ನ ಬಗ್ಗೆ ಆಕ್ಷೇಪಾರ್ಹ, ಅವಹೇಳನಕಾರಿ ಸುಳ್ಳುಸುದ್ದಿಗಳನ್ನು ಕಿಡಿಗೇಡಿಗಳು ಹರಡುತ್ತಿದ್ದಾರೆ. ಸಾಮಾಜಿಕ ಶಾಂತಿಗೆ ಭಂಗವಾಗುವ ರೀತಿಯಲ್ಲಿ, ಕೋಮುಗಲಭೆಗಳನ್ನು ಪ್ರಚೋದಿಸುವ ಸುದ್ದಿಗಳನ್ನು ರವಾನಿಸಿ ಮಾನಹಾನಿ ಮಾಡುತ್ತಿದ್ದಾರೆ. ಸಾರ್ವಜನಿಕರಲ್ಲಿ ತಪ್ಪು ಭಾವನೆಯನ್ನು ಮೂಡಿಸುವ ಒಳಸಂಚಿನ ಕೃತ್ಯವನ್ನು ಮಾಡುತ್ತಿದ್ದಾರೆ. ಈ ಬಗ್ಗೆ ಸುಳ್ಳು ಸುದ್ದಿ ಹರಡುವವರ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಪೊಲೀಸ್ ಠಾಣೆಗೆ ನೀಡಿರುವ ಲಿಖಿತ ದೂರಿನಲ್ಲಿ ತಿಳಿಸಿದ್ದಾರೆ.cp tumbe pic

ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಅವರು ಬೆಂಜನಪದವು ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶಗಳನ್ನು ರವಾನಿಸುತ್ತಿರುವುದು ಬೇಸರ ತಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸರು ಆರೋಪಿಗಳನ್ನು ಬಂಧಿಸಿ ಪ್ರಧಾನ ಆರೋಪಿಯ ಹುಡುಕಾಟದಲ್ಲಿದ್ದಾರೆ. ಹೀಗಿರುವಾವ ರಾಜಕೀಯ ದುರುದ್ದೇಶಕ್ಕಾಗಿ ಕೆಲ ವ್ಯಕ್ತಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇಂತಹ ಕೃತ್ಯದಲ್ಲಿ ತೊಡಗಿಸಿರುವ ವ್ಯಕ್ತಿಗಳ ದೂರವಾಣಿ ಸಹಿತ ಪೊಲೀಸ್ ಠಾಣೆಗೆ ದೂರು ನೀಡಿಲಾಗಿದ್ದು ತಕ್ಷಣ ಕ್ರಮ ಜರುಗಿಸಲು ಪೊಲೀಸರನ್ನು ಆಗ್ರಹಿಸಿರುವುದಾಗಿ ಅವರು ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *