ಬಂಟ್ವಾಳ:ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕೇವಲ ಓಟಿನ ಆಸೆ ಮತ್ತು ತುಷ್ಠೀಕರಣ ನೀತಿಯಿಂದ ಬಿಜೆಪಿ ಮತ್ತು ಸಂಘಪರಿವಾರವನ್ನು ಮಣಿಸಲು ಹಿಂದೂಗಳ ಹತ್ಯೆಗೆ ಮುಂದಾಗಿದೆ. ಇಂತಹ ಹಿಂದೂ ವಿರೋಧಿ ಲಜ್ಜೆಗೆಟ್ಟ ಸರ್ಕಾರವನ್ನು ರಾಜ್ಯದ ಜನತೆ ಒಟ್ಟಾಗಿ ಮನೆಗೆ ಕಳುಹಿಸುವ ದಿನ ದೂರವಿಲ್ಲ ಎಂದು ರಾಜ್ಯ ಬಿಜೆಪಿ ಸಹ ವಕ್ತಾರೆ ಸುಲೋಚನಾ ಜಿ.ಕೆ.ಭಟ್ ಹೇಳಿದ್ದಾರೆ.

DSC_4158
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಬಳಿ ಹಿಂದೂ ಹಿತ ರಕ್ಷಣಾ ಸಮಿತಿ ಮತ್ತಿತರ ಸಂಘಟನೆ ವತಿಯಿಂದ ಮಂಗಳವಾರ ದಿನವಿಡೀ ನಡೆದ ಉಪವಾಸ ಸತ್ಯಾಗ್ರಹದಲ್ಲಿ ಅವರು ಮಾತನಾಡಿ ಆಕ್ರೋಶ ವ್ಯಕ್ತಪಡಿಸಿದರು.ಕಳೆದ ಎರಡು ತಿಂಗಳ ಹಿಂದೆ ನಡೆದ ಕಲ್ಲಡ್ಕ ಘರ್ಷಣೆ ಬಳಿಕ ಮೆಲ್ಕಾರ್, ತುಂಬೆ ಮತ್ತು ಕಣ್ಣೂರು ಮತ್ತಿತರ ಪ್ರದೇಶದಲ್ಲಿ ಹಿಂದೂ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ಮತ್ತು ಹತ್ಯಾಯತ್ನ ನಡೆಸಿರುವ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ರಾಜ್ಯ ಸರ್ಕಾರದ ಒತ್ತಡಕ್ಕೆ ಮಣಿದು ಮೌನ ವಹಿಸಿದ್ದಾರೆ. ಇದೀಗ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ದುಷ್ಕರ್ಮಿಗಳಿಂದ ಹತ್ಯೆಯಾಗಿ ಒಂದು ತಿಂಗಳು ಕಳೆದಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ಕೂಡಾ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಪೊಲೀಸರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಹಿತ ರಾಜ್ಯ ಸರ್ಕಾರದ ಒತ್ತಡ ಇರುವುದು ಖಚಿತವಾಗಿದೆ ಎಂದು ಅವರು ಆರೋಪಿಸಿದರು.8btl-Protest-1

ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಮತ್ತು ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಹಿಂದೂ ಸಂಘಟನೆ ಮುಖಂಡ ಜಿತೇಂದ್ರ ಕೊಟ್ಟಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ ಮತ್ತಿತರರು ಮಾತನಾಡಿ, ಎಸ್‍ಡಿಪಿಐ ಮುಖಂಡ ಆಶ್ರಫ್ ಕಲಾಯಿ ಹತ್ಯೆ ಆರೋಪಿಗಳನ್ನು ಬಂಧಿಸಲು ಮುತುವರ್ಜಿ ವಹಿಸಿದ ಪೊಲೀಸರಿಗೆ ಶರತ್ ಹತ್ಯೆ ಆರೋಪಿಗಳು ಏಕೆ ಸಿಗುತ್ತಿಲ್ಲ…? ಎಂದು ಪ್ರಶ್ನಿಸಿದರು.8btl-Protest

ಎಸ್‍ಡಿಪಿಐ ಮುಖಂಡ ಆಶ್ರಫ್ ಕಲಾಯಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಬಂಧನದಲ್ಲಿ ಭಾರೀ ಪ್ರಮಾಣದ ಹಣಕಾಸು ವ್ಯವಹಾರ ನಡೆದಿದ್ದು, ಈ ಷಡ್ಯಂತ್ರದ ಹಿಂದೆ ಕಾಂಗ್ರೆಸ್ಸಿನ ‘ಮರಳು ಮಾಫಿಯಾ’ ಅಡಗಿರುವುದು ಪೊಲೀಸರಿಗೆ ಗೊತ್ತಿದ್ದರೂ ಕೂಡಾ ಸುಮ್ಮನಾಗಿದ್ದಾರೆ ಎಂದು ಅವರು ಟೀಕಿಸಿದರು. ಆರ್‍ಎಸ್‍ಎಸ್ ವಿಭಾಗ ಕಾರ್ಯಕಾರಿ ಸದಸ್ಯ ಪ್ರವೀಣ ಸರಳಾಯ, ಮೃತ ಶರತ್ ಮಡಿವಾಳ ತಂದೆ ತನಿಯಪ್ಪ ಮಡಿವಾಳ, ಬಿಜೆಪಿ ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ, ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಸರಪಾಡಿ ಅಶೋಕ ಶೆಟ್ಟಿ, ಪ್ರವೀಣ ತುಂಬೆ, ಸುಂದರ ಭಂಡಾರಿ, ರಾಧಾಕೃಷ್ಣ ಅಡ್ಯಂತಾಯ ಮತ್ತಿತರರು ಮಾತನಾಡಿ, ಜಿಲ್ಲೆಯಲ್ಲಿ ಪ್ರಾಮಾಣಿಕ ಪೊಲೀಸರು ಮತ್ತಿತರ ಅಧಿಕಾರಿಗಳಿಗೆ ವರ್ಗಾವಣೆ ಶಿಕ್ಷೆ ನೀಡಲಾಗುತ್ತಿದೆ. ಇಂತಹ ಹಿಂದೂ ವಿರೋಧಿ ನೀತಿಯಿಂದಾಗಿ ಸ್ವತಃ ರಾಜ್ಯ ಸರ್ಕಾರಕ್ಕೆ ಅವಸಾನ ಸಮೀಪಿಸುತ್ತಿದೆ ಎಂದು ಟೀಕಿಸಿದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ, ಸಚಿವ ಬಿ.ರಮಾನಾಥ ರೈಗೆ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಪಿಎಫ್‍ಐ ಸಂಘಟನೆ ನಿಷೇಧಿಸುವಂತೆ ಆಗ್ರಹಿಸಿದರು. ವಿವಿಧ ಘೋಷಣೆ ಕೂಗುವುದರ ಜೊತೆಗೆ ಕೆಲಹೊತ್ತು ಭಜನೆ ಮೂಲಕ ‘ರಾಮನಾಮ’ ಜಪಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಕಮಲಾಕ್ಷಿ ಪೂಜಾರಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಯಶೋಧರ ಕರ್ಬೆಟ್ಟು, ಲಕ್ಷ್ಮೀ ಗೋಪಾಲ ಆಚಾರ್ಯ, ಮಾಜಿ ಅಧ್ಯಕ್ಷ ಹರೀಶ ಆಚಾರ್ಯ, ಪ್ರಮುಖರಾದ ಆನಂದ ಶಂಭೂರು, ರಮಾನಾಥ ರಾಯಿ, ಚರಣ್ ಜುಮಾದಿಗುಡ್ಡೆ, ವಜ್ರನಾಥ ಕಲ್ಲಡ್ಕ, ಸಂತೋಷ್ ಕುಮಾರ್ ಬೆಟ್ಟು, ಗಣೇಶ ರೈ, ಪ್ರಕಾಶ ಅಂಚನ್, ಪುರುಷೋತ್ತಮ ಸಾಲ್ಯಾನ್, ಕಿಶೋರ್ ಶೆಟ್ಟಿ, ಸೀತಾರಾಮ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *