ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಇದರ ವತಿಯಿಂದ ನಡೆಯುವ ತಾಲೂಕು ಮಟ್ಟದ ನವಜೀವನ ಸಮಿತಿಯ ಸಮಾವೇಶ ಕಾರ್ಯಕ್ರಮದ ಪೂರ್ವಬಾವಿ ಸಭೆಯು ಶ್ರೀವಿನಾಯಕ ಶಂಕರ ನಾರಾಯಣ ದುರ್ಗಾಂಬಾ ದೇವಸ್ಥಾನ ನಂದಾವರದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕಿನ ಜನಜಾಗೃತಿ ವೇದಿಕೆಯ ಅಧ್ಯಕ್ಷ ಪ್ರಕಾಶ ಕಾರಂತರವರು ವಹಿಸಿ ಕಾರ್ಯಕ್ರಮಕ್ಕೆ ಸಹಕಾರ ಕೋರಿದರು. 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಚಂದ್ರಶೇಖರ್ ಕೆ. ಪ್ರಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಮಾಹಿತಿ ನೀಡಿದರು. ಬಂಟ್ವಾಳ ತಾಲೂಕಿನ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಎ.ಸಿ ಭಂಡಾರಿ ಅವರು ಅಕ್ಟೋಬರ್ ತಿಂಗಳಲ್ಲಿ ನಡೆಯುವ ತಾಲೂಕು ಮಟ್ಟದ ನವಜೀವನ ಸಮಿತಿಯ ಸಮಾವೇಶ ಕಾರ್ಯಕ್ರಮವು ಶ್ರೀವಿನಾಯಕ ಂಕರ ನಾರಾಯಣ ದುರ್ಗಾಂಬಾ ದೇವಸ್ಥಾನ ನಂದಾವರದಲ್ಲಿ ನಡೆಸಲು ನಿರ್ಧರಿಸಲಾಗಿದ್ದು ಇದರ ಯಶಸ್ವಿಗೆ ಎಲ್ಲರ ಸಹಕಾರ ಯಾಚಿಸಿದರು.
ಬಂಟ್ವಾಳ ತಾಲೂಕಿನ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಕೈಯೂರು ನಾರಾಯಣ ಭಟ್, ಬಂಟ್ವಾಳ ತಾಲೂಕಿನ ಪ್ರಗತಿ ಬಂಧು ಸ್ವಸಹಾಯ ಸಂಘದ ಕೇಂದ್ರ ಒಕ್ಕೂಟ ಅಧ್ಯಕ್ಷ ಸದಾನಂದ ಗೌಡ ಉಪಸ್ಥಿತರಿದ್ದರು. ಸಭೆಯಲ್ಲಿ ತಾಲೂಕಿನ ಜನಜಾಗೃತಿ ವೇದಿಕೆಯ ಎಲ್ಲಾ ವಲಯಾಧ್ಯಕ್ಷರು, ಸದಸ್ಯರು ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ವಲಯಾಧ್ಯಕ್ಷರು, ಮೇಲ್ವಿಚಾಕರರು ಭಾಗವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕಿನ ಕೃಷಿ ಅಧಿಕಾರಿ ನಾರಾಯಣ ಕೆ. ಸ್ವಾಗತಿಸಿ, ಬಂಟ್ವಾಳ ವಲಯ ಮೇಲ್ವಿಚಾರಕ ಶಶಿಧರ್ ವಂದಿಸಿದರು.
