ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ಮೇಯರ್ ಕವಿತಾ ಸನಿಲ್ ಅವರು ನವೆಂಬರ್ 23ರಂದು ಫೋನ್ ಇನ್ ಕಾರ್ಯಕ್ರಮ ನಡೆಸಲಿದ್ದಾರೆ.ಸಾರ್ವಜನಿಕರು ಮಹಾಗರಪಾಲಿಕೆಗೆ ಸಂಬಂಧಿಸಿದ ಸಮಸ್ಯೆಗಳೇನಾದರೂ ಇದ್ದಲ್ಲಿ ದೂರವಾಣಿ ಸಂಖ್ಯೆ 0824-2220301 ಅಥವಾ 2220318 ಸಂಖ್ಯೆಗೆ ಗುರುವಾರ ಬೆಳಿಗ್ಗೆ 11 ಗಂಟೆಯಿಂದ 12 ಗಂಟೆಯವರೆಗೆ ಕರೆ ಮಾಡಿ ಮೇಯರ್‍ಗೆ ತಿಳಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
