ಬಂಟ್ವಾಳ:ಒಂದು ದೇಶದಲ್ಲಿ ಸಾಮಾಜಿಕ, ಆರ್ಥಿಕ, ರಾಜಕೀಯ ಬೆಳವಣಿಗೆಗೆ ಶೈಕ್ಷಣಿಕವಾಗಿ ಬೆಳವಣಿಗೆಯಾಗಬೇಕು. ರಾಷ್ಟ್ರದ ಪ್ರಗತಿಯ ಹಿಂದೆ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಬಂಟ್ವಾಳ ಎಸ್‍ವಿಎಸ್ ಕಾಲೇಜಿನಲ್ಲಿ ಸೋಮವಾರ ನಡೆದ ಸುವರ್ಣ ಮಹೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಬೇಕು. ಜಿಲ್ಲೆಯು ಅನೇಕ ಸಾಧಕರನ್ನು ನೀಡಿದ ಶಿಕ್ಷಣ ಕಾಶಿಯಾಗಿದೆ ಎಂದರು. ಆಲ್ ಕಾರ್ಗೋ ಲ್ಯಾಜಿಸ್ಟಿಕ್ ಲಿಮಿಟೆಡ್‍ನ ಅಧ್ಯಕ್ಷ ಶಶಿಕಿರಣ್ ಶೆಟ್ಟಿ ಮಾತನಾಡಿದರು.
ಹಿರಿಯ ಸಾಹಿತಿ, ಕಲಾವಿದ ಡಾ. ಪ್ರಭಾಕರ ಜೋಷಿ ಸಮಾರೋಪ ಭಾಷಣ ಮಾಡಿದರು. ಇದೇ ವೇಳೆ ಬಂಟ್ವಾಳ ಗೌರಿ ರಘುರಾಮ ಪ್ರಭು ಸ್ಮಾರಕ ಸಭಾಭವನ ಉದ್ಘಾಟಿಸಲಾಯಿತು. ಶ್ರೀ ವೆಂಕಟರಮಣ ಸ್ವಾವಿೂ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೂಡಿಗೆ ರಘುನಾಥ ಶೆಣೈ, ಉಪಾಧ್ಯಕ್ಷೆ ಎಂ.ಕಾವೇರಿ ಬಾಯಿ, ಸದಸ್ಯೆ ಹೇಮಲತಾ ಶೆಣೈ ಮತ್ತಿತರರು ಇದ್ದರು.

ಇದೇ ವೇಳೆ ಕಾಲೇಜಿನ ವಿದ್ಯಾರ್ಥಿಗಳಾದ ನವನೀತ್ ಶೆಟ್ಟಿ, ನಿತೇಶ್ ಇವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ವಂದಿಸಿದರು. ಕಾಲೇಜಿನ ಉಪಪ್ರಾಂಶುಪಾಲ ಪ್ರೊ.ಕೆ.ತುಕಾರಾಮ ಪೂಜಾರಿ, ಮುಖ್ಯ ಗ್ರ್ರಂಥಪಾಲಕಿ ಡಾ.ಎಚ್.ಆರ್.ಸುಜಾತ ಮತ್ತು ಉಪನ್ಯಾಸÀಕ ರಮಾನಂಧ ಭಟ್ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿ ರಕ್ಷಾ ಕಾರ್ಯಕ್ರಮ ನಿರೂಪಿಸಿದರು. ಆ ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.
—
