854

ಹುಬ್ಬಳ್ಳಿ: ಫೆ. 4 ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದು, ಅಂದು ಬೆಂಗಳೂರು ಬಂದ್ ಮಾಡಿ ಪ್ರಧಾನಿಗೆ ಕಪ್ಪುಬಾವುಟ ಪ್ರದರ್ಶಿಸುವ ಮೂಲಕ ಮಹದಾಯಿ ಹಾಗೂ  ಕಳಸಾ-ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಲಾಗುವುದು ಎಂದು ಕನ್ನಡಪರ ಹೋರಾಟಗಾರರ  ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳಸಾ ಬಂಡೂರಿ ವಿವಾದವನ್ನು ಪ್ರಧಾನಿ ನರೇಂದ್ರ ಮೋದಿಯವರು ಮಧ್ಯ ಪ್ರವೇಶಿಸಿ ಬಗೆಹರಿಸಬೇಕು. ಅಲ್ಲದೆ, ಇದಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರಕಾರದ ವಿರುದ್ಧ ಜ.25 ರಂದು ಸಮಗ್ರ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಹೇಳಿದರು.

ಸುದ್ಧಿಗೋಷ್ಠಿಯಲ್ಲಿ ಲೋಕನಾಥ ಹೆಬಸೂರು, ಅಮೃತ್ ಇಜಾರೆ, ಮಂಜುನಾಥ ಲೂತಿಮಠ, ಸಂಜಯ ಧುಮಕನಾಳ ಇನ್ನಿತರರು ಉಪಸ್ಥಿತರಿದ್ದರು.

 

By Suddi9

Leave a Reply

Your email address will not be published. Required fields are marked *