ಮೈಸೂರು: ಮೈಸೂರು-ಬೆಂಗಳೂರು ನಡುವಿನ ರೈಲು ಸಂಚಾರ ಸೇರಿದಂತೆ ಹಲವು ಯೋಜನೆಗಳ ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಲು ಫೆ.19ಕ್ಕೆ ಮೈಸೂರಿಗೆ ಆಗಮಿಸಲಿದ್ದಾರೆ ಎಂದು ಸಂಸದ ಪ್ರತಾಪ್‍ಸಿಂಹ ತಿಳಿಸಿದ್ದಾರೆ.
ಅಂದು ಪ್ರಾಧನಿಯವರು ಮೈಸೂರು, ರಾಜಸ್ಥಾನ ನಡುವಿನ ಹೊಸ ರೈಲು ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಲಿದ್ದು, ಪ್ರಸಕ್ತ ಬಜೆಟ್‍ನಲ್ಲಿ 789.29 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿರುವ ನಾಗನಹಳ್ಳಿ ಸಾಟಸೈಟ್ ರೈಲ್ವೆ ನಿಲ್ದಾಣವನ್ನು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಅಲ್ಲದೆ, ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮೈಸೂರು-ಬೆಂಗಳೂರು ನಡುವೆ 8 ಪಥದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ ಎಂದಿದ್ದಾರೆ.
ಬಳಿಕ ಅಂದು ಸಂಜೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಕಟನೆಯಲ್ಲಿ ಹೇಳಿದ್ದಾರೆ.

