++

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆ.16 ರಂದು ಈ ಸರಕಾರದ ಕೊನೆಯ ಹಾಗೂ 2018-19ನೆ ಸಾಲಿನ ಆಯವ್ಯಯ ಮಂಡನೆ ಮಾಡಲಿದ್ದಾರೆ.

 ರಾಜ್ಯ ಸರಕಾರ ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತ ಸಮುದಾಯಗಳಿಗೆ ಭರಪೂರ ಕೊಡುಗೆಗಳನ್ನು ಪ್ರಕಟಿಸುವ ಸಾಧ್ಯತೆಗಳಿವೆ. ಜತೆಗೆ ರೈತರ ಓಲೈಕೆ, ಸರಕಾರಿ ನೌಕರರಿಗೆ ವೇತನವನ್ನು ಶೇ.20ರಷ್ಟು ಏರಿಕೆ ಘೋಷಣೆ ಮಾಡುವ ನಿರೀಕ್ಷೆ ಇದೆ.

 ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ಆರನೆ ವೇತನ ಆಯೋಗ ಸಲ್ಲಿಸಿರುವ ವರದಿಯ ಶಿಫಾರಸ್ಸುಗಳ ಅನುಷ್ಠಾನ, ರೈತರ ಸಾಲಮನ್ನಾ, ಆರೋಗ್ಯ ವಲಯಕ್ಕೆ ಹೆಚ್ಚಿನ ಅನುದಾನ ಮೀಸಲಿಡಲಿದ್ದು, ಎಲ್ಲ ವರ್ಗದ ಜನರಿಗೆ ಆರೋಗ್ಯ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

By Suddi9

Leave a Reply

Your email address will not be published. Required fields are marked *