ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಕೆಎಸ್ಸಾರ್ಟಿಸಿ ಮುಖ್ಯವಸ್ಯವಸ್ಥಾಪಕ ಪ್ರಕಟಣೆ ಹೊರಡಿಸಿದ್ದು, ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಕೆಎಸ್ಸಾಆರ್ಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯು ಮಾ.1 ರಿಂದ ಪ್ರಾರಂಭವಾಗುತ್ತಿದ್ದು, ಅಂದಿನಿಂದ ಪರೀಕ್ಷೆ ಮುಗಿಯುವವರೆಗೂ ವಿದ್ಯಾರ್ಥಿಗಳು ಪರೀಕ್ಷೆ ಇದ್ದ ದಿನ ಕೆಎಸ್ಸಾಆರ್ಟಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು.
ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಮತ್ತು ಪುನಃ ವಾಪಾಸ್ಸು ವಾಸಸ್ಥಳಕ್ಕೆ ಬರುವ ವೇಳೆ ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಪ್ರಯಾಣಿಸಬಹದು.

