ಹಾಸನ: ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೇಲೂರು ತಾಲೂಕಿನ ಅಂಗಡಿಹಳ್ಳಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಮೃತರನ್ನು ಶಾರುಖ್(20),ಸುರೇಶ್(20) ಎಂದು ಗುರುತಿಸಲಾಗಿದೆ.
ಬೇಲೂರು ತಾಲೂಕಿನ ಅಂಗಡಿಹಳ್ಳಿಯಲ್ಲಿ ಗ್ರಾಮ ಹಬ್ಬ ನಡೆಯುತ್ತಿದ್ದ ವೇಳೆ ಶಾರುಖ್ ಸೇರಿ ಮೂವರು ಬೈಕ್ ನಲ್ಲಿ ಚಲಿಸುತ್ತಿದ್ದರು. ಈ ಸಂದರ್ಭ ಲಾರಿಯೊಂದು ಢಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಮೃತಪಟ್ಟು, ಓರ್ವ ಗಾಯಗೊಂಡಿದ್ದಾನೆ. ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಯಿಂದ ಉದ್ರಿಕ್ತಗೊಂಡ ಗುಪೊಂದು ಈ ಭಾಗದಲ್ಲಿ ಸಂಚರಿಸುತ್ತಿದ್ದ ವಾಹಗಳ ಮೇಲೆ ಕಲ್ಲು ತೋರಾಟ ನಡೆಸಿದೆ. ಇದರಿಂದ ಕೆಲ ವಾಹನಗಳು ಜಖಂ ಗೊಂಡು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೋಲೀಸರು ಪರಿಸ್ಥಿಯನ್ನು ನಿಯಂತ್ರಿಸಿದ್ದಾರೆ.
ಈ ಬಗ್ಗೆ ಹಳೆಬೀಡು ಪೋಲೀಸ್ ಥಾಣೆಯಲ್ಲಿ ಪ್ರಕರಣ ದಾಖಲಾಗಿದೆ.

