ಶಿವಮೊಗ್ಗ: ಕಾರವಾರ ಮತ್ತು ಶಿವಮೊಗ್ಗದಲ್ಲಿ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರು ಜೆಡಿಎಸ್ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಶಾಸಕ ಮಧುಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಈ ಕುರಿತು ಮಾಹಿತಿ ನೀಡಿದ ಅವರು, ಗೀತಾ ಶಿವರಾಜ್ ಕುಮಾರ್ ಅವರು ಮಾ.19ರಿಂದ 4 ದಿನ ಮೊದಲ ಹಂತದಲ್ಲಿ ಜಿಲ್ಲಾ ಪ್ರವಾಸ ನಡೆಸಲಿದ್ದಾರೆ. ತೀರ್ಥಹಳ್ಳಿ, ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಿದರು.
ಈಗಾಗಲೇ ಜಿಲ್ಲೆಯ ಐದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ. ಈ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷ ವಿರೋಧಿ ಚಟುವಟಿಕೆ ನಡೆಸುವವರಿಗೆ ಜೆಡಿಎಸ್ ನಲ್ಲಿ ಸ್ಥಾನವಿಲ್ಲ ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದರು.

