ಮಂಗಳೂರು: ಪಬ್ ದಾಳಿ ಪ್ರಕರಣದಲ್ಲಿ ಆರೋಪಿಗಳು ಖುಲಾಸೆ ಆಗುವಲ್ಲಿ ಕಾಂಗ್ರೆಸ್ ಪಕ್ಷದ್ದೂ ತಪ್ಪಿದೆ ಎಂದು ಬಹುಭಾಷಾ ನಟ ಪ್ರಕಾಶ್ ರೈ ಕಿಡಿಕಾರಿದ್ದಾರೆ.
ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಆಯೋಜಿಸಿರುವ ಸಂವಾದದಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಪೊಲೀಸರು ತಪ್ಪು ಮಾಡಿರಬಹುದು. ಕೋಮುವಾದದ ವಿರುದ್ಧ ಇದ್ದೇನೆ ಎಂದು ಹೇಳಿಕೊಂಡ ಕಾಂಗ್ರೆಸ್ ಈ ಪ್ರಕರಣದ ತನಿಖೆ ಕುರಿತು ಎಚ್ಚರ ವಹಿಸಬೇಕಿತ್ತಲ್ಲವೇ ಎಂದು ಅವರು ಪ್ರಶ್ನಿಸಿದರು.

