ಮುದ್ದೇಬಿಹಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಮನುಸೂರ ಹುಸೇನಸಾಬು ಬಾಗವಾನ (28) ಮೃತ ಚಾಲಕ ಎಂದು ಗುರುತಿಸಲಾಗಿದೆ.
ಮನುಸೂರ ಅವರು ಮುದ್ದೇಬಿಹಾಳದಿಂದ ನಿಡಗುಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಸುಮಾರು ರಾತ್ರಿ 1ಕ್ಕೆ ಆಲಮಟ್ಟಿ ರಸ್ತೆಯ ಪಕ್ಕದಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

