ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ರಸ್ತೆ ವಿಭಜಗಕ್ಕೆ ಢಿಕ್ಕಿ ಹೊಡೆದ ಪರಿಣಾಮ 3 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ಇಲ್ಲಿನ ಬಸನವನ ಬಾಗೇವಾಡಿ ಪಟ್ಟಣ ಹೊರವಲಯದಲ್ಲಿ ಗುರುವಾರ ನಡೆದಿದೆ.
ಪುಣೆ-ದೇವದುರ್ಗ ನಡುವೆ ಸಂಚರಿಸುವ ಬಸ್ ಇದಾಗಿದ್ದು, ಬಸವನ ಬಾಗೇವಾಡಿ ಪಟ್ಟಣದ ಬಿಎಲ್ಡಿಇ ಕಾಲೇಜಿನ ಎದುರು ಗುರುವಾರ ನಸುಕಿನ ವೇಳೆ 4ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಗಕ್ಕೆ ಢಿಕ್ಕಿ ಹೊಡೆದು ಈ ಘಟನೆ ನಡೆದಿದ್ದು, ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಬಸವನ ಬಾಗೇವಾಡಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

