ಹೊಸದಿಲ್ಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಾ. 20 ರ ನಂತರ ಮತ್ತೆ ಎರಡು ದಿನ ರಾಜ್ಯದಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯ ಸರಕಾರದ ಜನಾಶೀರ್ವಾದ ಯಾತ್ರೆ ಹಿನ್ನೆಲೆಯಲ್ಲಿ ರಾಹುಲ್ ಅವರು ಮಾ.20 ಮತ್ತು 21 ರಂದು ದಕ್ಷಿಣ ಹಾಗೂ ಉಡಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಮಾ. 24 ಹಾಗೂ 25 ರಂದು ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.
ಈ ಮೊದಲು ಹೈ. ಕರ್ನಾಟಕ ಮತ್ತು ಮುಂಬೈ ಕರ್ನಾಟಕ ಜಿಲ್ಲೆಗಳಲ್ಲಿ ರಾಹುಲ್ ನೇತೃತ್ವದಲ್ಲಿ ಕೈಗೊಂಡ ಜನಾಶೀರ್ವಾದ ಯಾತ್ರೆ ಮೂಲಕ ಕಾಂಗ್ರೆಸ್ ಭರ್ಜರಿ ಪ್ರಚಾರ ನಡೆಸಿತ್ತು.

