ವಿಟ್ಲ: ಪುಸ್ತಕ ಸಾಹಿತ್ಯ ಸಂಘದ ವತಿಯಿಂದ ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ರಚಿತವಾದ ‘ಬೆಳದಿಂಗಳು’ ಕವನ ಸಂಕಲನ ಪುಸ್ತಕವನ್ನು ಹಿರಿಯ ಸಾಹಿತಿ ವಿ.ಬಿ.ಕುಳಮರ್ವರು ಇಲ್ಲಿನ ವಿಟ್ಲ ಶತಮಾನೋತ್ಸವ ಭವನದಲ್ಲಿ ಸೋಮವಾರ ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರ ಬಿ.ವಿಶ್ವನಾಥಗೌಡ, ಶಾಲಾ ಗೌರವಾಧ್ಯಕ್ಷ ಸುಬ್ರಾಯ ಪೈ, ಎಸ್ ಡಿಎಂಸಿ ಅಧ್ಯಕ್ಷ ಜಗನ್ನಾಥ ಕಾಸರಗೋಡು ಮತ್ತಿತರರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಕಾವ್ಯಶೆಟ್ಟಿ ಸ್ವಾಗತಿಸಿ, ವಿದ್ಯಾರ್ಥಿನಿ ಧನ್ಯಶ್ರೀ ವಂದಿಸಿದರು. ಸಹಶಿಕ್ಷಕಿ ಶ್ರೀಮತಿ.ಕೆ ಕಾರ್ಯಕ್ರಮವನ್ನು ನಿರ್ವಹಿಸಿದರು.
ಕವನ ಸಂಕಲನವನ್ನು ರಚಿಸುವಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ಭಾಸ್ಕರ ಅಡ್ವಾಳ ಸಹಕರಿಸಿದರು.

