ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಶುಕ್ರವಾರ ಮಿನಿ ವಿಧಾನ ಸೌಧಕ್ಕೆ ತೆರೆಳಿ ಚುನಾವಣಾಧಿಕಾರಿಗೆ ನಾಮ ಪತ್ರ ಸಲ್ಲಿಸಿದರು.
ಅದ್ದೂರಿ ಪಾದಯಾತ್ರೆ: ರಾಜೇಶ್ ನಾಯ್ಕ್ ಅವರು ನಾಮಪತ್ರ ಸಲ್ಲಿಸುವ ಮುನ್ನ ಕ್ಷೇತ್ರದ ಪ್ರತಿಷ್ಠಿತ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ನೆರವೇರಿಸಿದ ಬಳಿಕ ಪಕ್ಷದ ಕಾರ್ಯಕರ್ತರ ಹಾಗೂ ಅನುಯಾಯಿಗಳೊಂದಿಗೆ ಪೊಳಲಿಯಿಂದ ಬಿ.ಸಿ.ರೋಡ್ ವರೆಗೆ ಪಾದಯಾತ್ರೆ ಕೈಗೊಂಡರು.
ಈ ಸಂದರ್ಭದಲ್ಲಿ ಸಂಸದ ಬನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ, ಮುಖಂಡ ದೇವದಾಸ ಶೆಟ್ಟಿ ಮತ್ತಿತರರು ಸಾಥ್ ನೀಡಿದರು.




