ಮಂಗಳೂರು: ನಗರದ ಕೇಂದ್ರ ಮೈದಾನದಲ್ಲಿ ಮೇ 5ರಂದು ನಡೆಯಲಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಿ ಲಕ್ಷಾಂತರ ಜನರನ್ನು ಉದ್ದೇಶಿಸಿ ಮಾತನಾಡಲಿದ್ದು, ಈ ಹಿನ್ನೆಲೆ ಮೋದಿಯವರ ಕಾರ್ಯಕ್ರಮಕ್ಕೆ ಬಂಟ್ವಾಳ ಕ್ಷೇತ್ರದ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಬೇಕೆಂದು ಬಿಜೆಪಿ ಬಂಟ್ವಾಳದ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಪ್ರಕಟನೆಯಲ್ಲಿ ಕೋರಿದ್ದಾರೆ.

