ಬಂಟ್ವಾಳ: ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ನೂತನ ಶಾಸಕರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿ ಸರಪಾಡಿ ಶರಬೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದರು.
ಈ ಸಂಧರ್ಭದಲ್ಲಿ ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಕ್ಷೇತ್ರ ಉಪಾಧ್ಯಕ್ಷ ನಾರಾಯಣ ಪೂಜಾರಿ ಬೊಳ್ಳುಕಲ್ಲು, ಕ್ಷೇತ್ರ ಕಾರ್ಯದರ್ಶಿ ರಂಜಿತ್ ಮೈರ, ಸರಪಾಡಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಶಶಿಕಾಂತ್ ಶೆಟ್ಟಿ, ಸರಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೀಲಾವತಿ, ಧರ್ಣಪ್ಪ ಪೂಜಾರಿ, ಉಪಾಧ್ಯಕ್ಷರಾದ ದಯಾನಂದ ಶೆಟ್ಟಿ ಮುನ್ನಲಾಯಿ, ಮಣಿನಾಲ್ಕೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ದಿನೇಶ್ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

