ಮಂಗಳೂರು: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಬೃಹತಾಕಾರ ಅಶ್ವ ಮರವೊಂದರ ಟೊಂಕೆ ಉರುಳಿಬಿದ್ದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ನಗರದ ಇತಿಹಾಸ ಪ್ರಸಿದ್ಧ ಮಂಗಳಾದೇವಿ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ದೇವಸ್ಥಾನದಲ್ಲಿ ಪೂಜೆ ನಡೆಯುತ್ತಿದ್ದ ವೇಳೆ ಅಲ್ಲಿನ ಪ್ರವೇಶ ದ್ವಾರಕ್ಕೆ ಮರದ ಟೊಂಕೆ ಉರುಳಿಬಿದ್ದಿದ್ದು, ಪರಿಣಾಮ ನಾಲ್ವರಿಗೆ ಗಾಯವಾಗಿವಾಗಿದೆ. ಇನ್ನು ಇದರಲ್ಲಿ ಓರ್ವನ ಸ್ಥಿತಿ ಗಂಭೀರ ಎಂದು ಹೇಳಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ಮರ ತೆರವಿಗೆ ಕಾರ್ಯಚರಣೆ ಮುಂದುವರಿಸಿದ್ದಾರೆ.



