ಬೆಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ಜಯನಗರ ಚುನಾವಣಾ ಕ್ಷೇತ್ರದ ಮತಎಣಿಕೆ ನಗರದ ಎಸ್.ಎಸ್.ಎಂ.ಆರ್.ವಿ.ಕಾಲೇಜಿನಲ್ಲಿ ನಡೆಯುತ್ತಿದ್ದು, ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಒಟ್ಟು 12 ಸುತ್ತಿನಲ್ಲಿ ಮತ ಎಣಿಕೆ ಆಗಲಿದೆ. ಇದಕ್ಕಾಗಿ ಮತ ಎಣಿಕೆ ಕೇಂದ್ರದಲ್ಲಿ 16 ಟೇಬಲ್ ಗಳ ವ್ಯವಸ್ಥೆ ಮಾಡಲಾಗಿದೆ.
ಮೊದಲನೇ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡಿರುವ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ, ಬಿಜೆಪಿ ಅಭ್ಯರ್ಥಿ ಬಿ.ಎನ್.ಪ್ರಹ್ಲಾದ್ ಅವರನ್ನು ಹಿಂದಿಕ್ಕಿದ್ದಾರೆ.

