2ad24e12-de64-4dc9-bc7d-70be809f6edd-large16x9_1280x720_80119B00WTPDD

ಬಂಟ್ವಾಳ: ತಾಲೂಕಿನ ಬಿ.ಸಿ.ರೋಡ್ ಸಮೀಪದ ಕೈಕಂಬ ಪೊಳಲಿ ದ್ವಾರ ಬಳಿ ಕಳೆದ ಒಂದೂವರೆ ವರ್ಷಗಳ ಹಿಂದೆ ದರೋಡೆ ಪ್ರಕರಣವೊಂದರಲ್ಲಿ ಸಿಲುಕಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿ ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುವಾರ ನಡೆದಿದೆ.

ಬಂಧಿತ ಆರೋಪಿಯನ್ನು ಇಲ್ಲಿನ ತುಂಬೆ ಸಮೀಪದ ರೊಟ್ಟಿಗುಡ್ಡೆ ನಿವಾಸಿ ಮಹಮ್ಮದ್ ಹನೀಫ್ ಎಂಬವರ ಪುತ್ರ ಮಹಮ್ಮದ್ ಫಯಾಝ್ (27) ಎಂದು ಗುರುತಿಸಲಾಗಿದ್ದು,  ಗುರುವಾರ ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಕಳೆದ ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನು ಬಳಿಕ ವಿದೇಶಕ್ಕೆ ತೆರಳಿದ್ದು, ಇದೀಗ ಊರಿಗೆ ಮರಳಲು ಆತನು ಮುಂಬೈ ಸಹರಾ ಏರ್ಪೋಟರ್ಟ್ ಗೆ ಬುಧವಾರ ಬರುತ್ತಿದ್ದಂತೆಯೇ ಅಲ್ಲಿನ ಪೊಲೀಸರು ಆರೋಪಿಯನ್ನು ಬಂಧಿಸಿ ಗುರುವಾರ ನಗರ ಠಾಣೆ ಪೊಲೀಸರಿಗೆ ಹಸ್ತಾಂತರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ

By Suddi9

Leave a Reply

Your email address will not be published. Required fields are marked *