ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ಪ್ರಕರಣ ಸಂಬಂಧ ಜೈಲು ಸೇರಿರುವ ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಗೆ ಇಂದು ರಾಜ್ಯ ಉಚ್ಚ ನ್ಯಾಯಾಲದ ನ್ಯಾಯಮೂರ್ತಿಗಳಾದ ಮೈಕಲ್ ಕುನ್ಹಾ ಅವರು ಷರತ್ತು ಬದ್ದ ಜಾಮೀನು ನೀಡಿದ್ದಾರೆ. ಇದರೊಂದಿಗೆ ಕಳೆದ 116 ದಿವಸಗಳ ಕಾಲ ಜೈಲಿನಲ್ಲಿ ಕಾಲಕಳೆಯುತ್ತಿದ್ದ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಜೈಲಿನಿಂದ ಹೊರ ಬರುವುದಕ್ಕೆ ಕ್ಷಣಗಣನೆ ಶುರುವಾಗಿದೆ.
ಹೈಕೋರ್ಟ್ ನಲ್ಲಿ ವಾದ ಪ್ರತಿವಾದ ನಿನ್ನೆಗೆ ಮುಕ್ತಾಯ ಹಂತಕ್ಕೆ ತಲುಪಿದೆ. ಎರಡು ಕಡೆಯ ವಾದ ಪ್ರತಿವಾದ ಆಲಿಸಿ ಹೈಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಹಾಗಾಗಿ ನಲಪಾಡ್ ನ ಜಾಮೀನು ಅರ್ಜಿಯ ಭವಿಷ್ಯ ಇಂದು ನಿರ್ಧಾರವಾಯಿತು.
ಇದೇ ವೇಳೆ ಹೈಕೋರ್ಟ್ ನಲ್ಲಿ ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರವಾಗಿ ನಲಪಾಡ್ ಪರ ಬಿ.ವಿ ಆಚಾರ್ಯ ವಾದ ಮಾಡಿದರು. ಇದೇ ವೇಳೆ ಜಾಮೀನು ನೀಡದಂತೆ ವಿದ್ವತ್ ಪರ ವಕೀಲ ಶ್ಯಾಮ್ ಸುಂದರ್ ವಾದ ಮಾಡಿದರು.

