ವಿಟ್ಲ: ದ ಕ ಜಿ ಪಂ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಗಿರಿ ಪಡಿಬಾಗಿಲು ಇಲ್ಲಿ ವಿದ್ಯಾರ್ಥಿ ಪೋಷಕರ ಸಭೆಯು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕಾರಂತರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಪ್ರತಿಭ ಕಾರಂಜಿ ಕಾರ್ಯಕ್ರಮಕ್ಕೆ ಬೇಕಾದ ಪೂರ್ವತಯಾರಿ ಬಗ್ಗೆ ಸಲಹೆ ಸೂಚನೆ ನೀಡಲಾಯಿತು. ಎಸ್ ಡಿ ಎಂ ಸಿ ಉಪಾಧ್ಯಕ್ಷೆ ರೇಖಾ ಹಾಗೂ ಸರ್ವ ಸದಸ್ಯರು ಭಾಗವಹಿಸಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಶಶಿಕಲಾ ಪ್ರಸ್ತಾವಿಸಿ ಸ್ವಾಗತಿಸಿದರು. ಸಹಶಿಕ್ಷಕಿ ಮಲ್ಲಿಕಾ ಕೆ ಎಸ್ ವಂದಿಸಿದರು. ಶಿಕ್ಷಕಿ ಪುಷ್ಪಾವತಿ ಎಂ ಕಾರ್ಯಕ್ರಮ ನಿರೂಪಿಸಿದರು.
