ಮೂಡುಬಿದಿರೆ: ಜೈನ ಪದವಿ ಪೂರ್ವ ಕಾಲೇಜಿನ ಸುವರ್ಣ ಮಹೋತ್ಸವದ ಪೂರ್ವಭಾವಿಯಾಗಿ ಹಳೆ ವಿದ್ಯಾರ್ಥಿಗಳ ಸಮಾವೇಶವು ರವಿವಾರ ಕಾಲೇಜಿ ಸಭಾಂಗಣದಲ್ಲಿ ನಡೆಯಿತು.

jain clf-suvarna mahothsava (1)
ಕಾಲೇಜಿನ ಸಂಚಾಲಕ ಕೆ.ಹೇಮರಾಜ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶತಮಾನದ ಇತಿಹಾಸ ಹೊಂದಿರುವ ಮೂಡುಬಿದಿರೆ ದಿಗಂಬರ ಜೈನ ವಿದ್ಯಾವರ್ಧಕ ಸಂಘದ ಆಡಳಿತಕ್ಕೊಳಪಟ್ಟ ಜೈನ ಪ.ಪೂ.ಕಾಲೇಜು 1971-72 ರಲ್ಲಿ ನಿರ್ಮಾಣವಾಗಿದೆ. ಇದೀಗ 48 ಸಂವತ್ಸರಗಳನ್ನು ಪೂರೈಸಿದ ಕಾಲೇಜು ಸುವರ್ಣ ಮಹೋತ್ಸವ ಆಚರಣೆಯ ಪೂರ್ವಭಾವಿಯಾಗಿ ಹಳೆವಿದ್ಯಾರ್ಥಿಗಳ ಸಮಾವೇಶವನ್ನು ಆಯೋಜಿಸಲಾಗಿತ್ತು. 2020-21 ನೇ ಶೈಕ್ಷಣಿಕ ವರ್ಷದಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನೂ ವಿಶಿಷ್ಠ ರೀತಿಯಲ್ಲಿ ಆಚರಿಸಲು ನಿರ್ಧರಿಸಿದೆ. ಮೂಡುಬಿದಿರೆ ಪರಿಸರದಲ್ಲಿ ತನ್ನ ಮೌಲ್ಯಯುತ ಶಿಕ್ಷಣ ಹಾಗೂ ಶಿಸ್ತಿಗೆ ಹೆಸರಾಗಿರುವ ಈ ಸಂಸ್ಥೆಯು ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಭಧ್ರ ಬುನಾದಿಯನ್ನು ಕಲ್ಪಿಸಿ ಉತ್ತಮ ಭವಿಷ್ಯವನ್ನು ರೂಪಿಸಿದೆ. ಇಲ್ಲಿ ಅಧ್ಯಯನ ಮಾಡಿದ ಹಲವಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ದೇಶ ವಿದೇಶಗಳಲ್ಲಿ ಪ್ರತಿಷ್ಠಿತರಾಗಿದ್ದು ಅವರೆಲ್ಲರನ್ನೂ ಸಂಪರ್ಕಿಸಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಮಾಡಲು ಪ್ರಯತ್ನಿಸಲಾಗುವುದು. ಯಾವುದೇ ಸಂಸ್ಥೆಗೆ ಅದರ ಹಳೆ ವಿದ್ಯಾರ್ಥಿಗಳೇ ನಿಜವಾದ ಆಸ್ತಿ. ಸಂಸ್ಥೆಯ ಬೆಳವಣಿಗೆಯಲ್ಲಿ ಅವರ ಕೊಡುಗೆ ಅಪಾರ ಎಂದು ಹೇಳಿದರು.

jain clf-suvarna mahothsava (2)
ಸಂಸ್ಥೆಯ ಅವಶ್ಯಕತೆಗಳ ಬಗ್ಗೆ ಈಗಾಗಲೇ ಪ್ರಾಚಾರ್ಯರು ಹಾಗೂ ಸಿಬ್ಬಂದಿಗಳೊಡನೆ ಚರ್ಚೆ ನಡೆಸಲಾಗಿದೆ. ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ಸಂಸ್ಥೆಯ ಬಹು ವರ್ಷದ ಬೇಡಿಕೆಯಾದ ಬಯಲು ರಂಗಮಂದಿರ ನಿರ್ಮಾಣ, ಬಹೂಪಯೋಗಿ ಸಭಾಂಗಣ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದ ಮೂಡುಬಿದಿರೆ ಚೌಟರ ಅರಮನೆಯ ದಿ. ಎಂ.ಸುನೀಲಕೀರ್ತಿ ಸ್ಮರಣಾರ್ಥ ರಾಜ್ಯಮಟ್ಟದ ವಿಚಾರ ಸಂಕಿರಣ ಇತ್ಯಾದಿಗಳನ್ನು ಏರ್ಪಡಿಸಲಾಗುವುದು ಎಂದು ಪ್ರಕಟಿಸಿದರು.
ಈ ಮಹೋತ್ಸವದ ಬಗ್ಗೆ ಸರಿಯಾಗಿ ಚರ್ಚಿಸುವ ಸಲುವಾಗಿ ಸೆಪ್ಟೆಂಬರ್ 23 ರಂದು ಇನ್ನೊಮ್ಮೆ ಸಂಸ್ಥೆಯ ಹಳೆ ವಿದ್ಯಾರ್ಥಿಗಳ ಸಮಾವೇಶವನ್ನೂ ನಡೆಸಿ ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಹಳೆ ವಿದ್ಯಾರ್ಥಿಗಳ ಪರವಾಗಿ ಪ್ರೊ.ಎಂ.ರವೀಶ್ ಕುಮಾರ್, ನೋಬರ್ಟ್ ಮಾರ್ಟಿಸ್, ಸಂತೊಷ್ ಪೂಜಾರಿ, ವಕೀಲ ಶಾಂತಿಪ್ರಸಾದ್ ಹೆಗ್ಡೆ, ಸುದೇಶ್ ಕುಮಾರ್, ರೋಹಿತ್ ಕುಮಾರ್ ಮೊದಲಾದವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಳೆ ವಿದ್ಯಾರ್ಥಿಗಳನ್ನು ಒಗ್ಗೂಡಿಸಲಾಗುವುದು ಎಂದು ಭರವಸೆ ನೀಡಿದರು.ಪ್ರಾಚಾರ್ಯ ಮಧುಕರ ಸಾಲಿನ್ಸ್ ಪ್ರಾಸ್ತಾವಿಸಿ, ಸ್ವಾಗತಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಮಹಾವೀರ ಜೈನ್ ಎಂ. ಕಾರ್ಯಕ್ರಮ ನಿರೂಪಿಸಿ, ಪ್ರಭಾತ್ ಬಿ. ವಂದಿಸಿದರು.

By Suddi9

Leave a Reply

Your email address will not be published. Required fields are marked *