ಮೂಡುಬಿದಿರೆ: ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಆಯೋಜಿಸಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ಕುಸ್ತಿ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡ ಸತತ 14ನೇ ಬಾರಿಗೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಹಾಗೂ ಆಳ್ವಾಸ್‍ನ ದೈಹಿಕ ಶಿಕ್ಷಣ ಕಾಲೇಜು ಎರಡು ವಿಭಾಗಗಳಲ್ಲೂ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Mangalore VV Wrestling
ಪಂದ್ಯಾಟದಲ್ಲಿ ಒಟ್ಟು 16 ವಿಭಾಗಗಳಲ್ಲಿ ನಡೆದಿರುವ ಸ್ಪರ್ಧೆಯಲ್ಲಿ ಪುರುಷರ 7 ಹಾಗೂ ಮಹಿಳೆಯರ 5 ವಿಭಾಗಗಳಲ್ಲಿ ಒಟ್ಟು 12 ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜೇತ ಕ್ರೀಡಾಪಟುಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.

By Suddi9

Leave a Reply

Your email address will not be published. Required fields are marked *