ಮೂಡುಬಿದಿರೆ: ಮಿಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡೆದ ಆಳ್ವಾಸ್ ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಸೈಬರ್ ಕ್ರೈಂ ಮತ್ತು ಮಾದಕ ವ್ಯಸನಗಳ ಕುರಿತಾದ ಮಾಹಿತಿ ಕಾರ್ಯಾಗಾರದಲ್ಲಿ ಶೃಂಗೇರಿಯ ಪೊಲೀಸ್ ವೃತ್ತ ನಿರೀಕ್ಷಕ ಪ್ರಮೋದ್ ಕುಮಾರ್ ಪಾಲ್ಗೊಂಡು ಸೈಬರ್ ವಂಚನೆಗಳಿಂದ ಹೇಗೆ ದೂರವಿರಬಹುದು ಎನ್ನುವುದರ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಸಣ್ಣ ಪುಟ್ಟ ಸವಾಲುಗಳಿಗೆ ಅಂಜಿ ಮಾದಕ ವ್ಯಸನಗಳ ಮೊರೆ ಹೋಗದಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಪ್ರಾಚಾರ್ಯ ರಮೇಶ್ ಶೆಟ್ಟಿ ಹೆಚ್, ಆಡಳಿತಾಧಿಕಾರಿ ಅಭಿನಂದನ್ ಶೆಟ್ಟಿ, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ., ಎನ್ನೆಸ್ಸೆಸ್ ಯೋಜನಾಧಿಕಾರಿ ದಾಮೋದರ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಉಪನ್ಯಾಸಕ ಅಂಬರೀಷ್ ಚಿಪಳೂಣಕರ್ ನಿರ್ವಹಿಸಿದರು.
