ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ, ದ.ಕ. ಹಾಗೂ ಆಳ್ವಾಸ್ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಬಾಲಕರ ವಿಭಾಗದಲ್ಲಿ 117 ಅಂಕ ಹಾಗೂ ಬಾಲಕಿಯರ ವಿಭಾಗದಲ್ಲಿ 119 ಅಂಕ ಪಡೆದು ಒಟ್ಟು 236 ಅಂಕದೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆಯಿತು.

Dist PU Sports
ಆಳ್ವಾಸ್ ಪದವಿಪೂರ್ವ ಕಾಲೇಜು ಒಟ್ಟು 31 ಚಿನ್ನ, 23 ಬೆಳ್ಳಿ ಮತ್ತು 09 ಕಂಚಿನ ಪದಕಗಳೊಂದಿಗೆ 63 ಪದಕಗಳನ್ನು ಪಡೆದು ಸಂತಫಿಲೋಮಿನಾ ಕಾಲೇಜು 04 ಚಿನ್ನ, 04 ಬೆಳ್ಳಿ ಹಾಗೂ 16 ಕಂಚಿನ ಪದಕದೊಂದಿಗೆ 61 ಅಂಕ ಪಡೆದು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆಯಿತು.
ಬಾಲಕರ ವಿಭಾಗದಲ್ಲಿ ಆಳ್ವಾಸ್ ಪ.ಪೂ. ಕಾಲೇಜಿನ ಮಿಲನ್ ನವನೀತ್ ಹಾಗೂ ಸಂತ ಫಿಲೋಮಿನಾ ಕಾಲೇಜಿನ ಪ್ರೀತಮ್ ರೈ, ಬಾಲಕಿಯರ ವಿಭಾಗದಲ್ಲಿ ಆಳ್ವಾಸ್‍ನ ಜ್ಯೋತ್ಸ್ನಾ ವೈಯಕ್ತಿಕ ಪ್ರಶಸ್ತಿಯನ್ನು ಪಡೆದರು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ದೇವಿಪ್ರಸಾದ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲ ಪ್ರೊ. ರಮೇಶ್ ಶೆಟ್ಟಿ, ಜಿಲ್ಲಾ ಕ್ರೀಡಾ ಸಂಯೋಜಕ ಪ್ರೇಮನಾಥ್ ಶೆಟ್ಟಿ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ನವೀನ್ ರೈ ಹಾಗೂ ಹರ್ಷಿತಾ ಶೆಟ್ಟಿ ಉಪಸ್ಥಿತರಿದ್ದರು. ಪ್ರಮೋದ್ ಕುಮಾರ್ ರೈ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *