ಬಂಟ್ವಾಳ: ಪ್ರಕೃತಿ ಬೆಳಕು ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಗಿಡನೆಡುವ ಹಾಗೂ “ವನಮಹೋತ್ಸವ ಹಬ್ಬ” ಕಾರ್ಯಕ್ರಮವನ್ನು ಜು.೧೩ರಂದು ಬೆಳಿಗ್ಗೆ ೯.೩೦ಕ್ಕೆ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕೃತಿ ಬೆಳಕು ಸಂಘದ ಬಂಟ್ವಾಳ ತಾಲೂಕು ಕಾರ್ಯದರ್ಶಿ ಪ್ರಿಯಾ ಡಿಸೋಜ ತಿಳಿಸಿದ್ದಾರೆ.8 btl prakrthi
ಅವರು ಸೋಮವಾರ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದ.ಕ. ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್, ಸಹಾಯಕ ಆಯುಕ್ತ ರವಿಚಂದ್ರ ನಾಯ್ಕ್, ಜಿಲ್ಲಾ ಎಸ್ಪಿ ಲಕ್ಷ್ಮೀ ಪ್ರಸಾದ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಸಂಘದ ಅಧ್ಯಕ್ಷ ಪ್ರಿಯಾಡಿಸೋಜ ಅಧ್ಯಕ್ಷತೆ ವಹಿಸುವರು. ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್., ಬಂಟ್ವಾಳ ವಲಯ ಅರಣ್ಯಾಧಿಕಾರಿ ಸುರೇಶ್ ನಾಯ್ಕ್, ತಾಪಂ ಇಒ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್, ತಾಲೂಕು ಆರೋಗ್ಯ ಅಧಿಕಾರಿ ದೀಪಾ ಪ್ರಭು, ಎಎಸ್ಪಿ ಸೈದುಲು ಅಡಾವತ್, ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷ ಟಿ.ಡಿ.ನಾಗರಾಜ್, ಟ್ರಾಫಿಕ್ ಎಸ್ಸೈ ಮಂಜುನಾಥ, ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ, ಮೆಸ್ಕಾಂ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ನಾರಾಯಣ ಭಟ್, ತೋಟಗಾರಿಕೆ ಇಲಾಖೆಯ ದಿನೇಶ್ ಹಾಗೂ ಮತ್ತಿತರ ಸಂಘ, ಸಂಸ್ಥೆಗಳ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸುವರು ಎಂದು ಮಾಹಿತಿ ನೀಡಿದರು.
ಜನರಲ್ಲಿ ಕಾಡು ಹಾಗೂ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಮುಂದಿನ ಪೀಳಿಗೆಗೆ ಅತೀ ಹೆಚ್ಚು ಸಸಿಗಳನ್ನು ನೆಟ್ಟು ಪರಿಸರ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹಸಿರೇ ಉಸಿರು, ಪ್ಲಾಸ್ಟಿಕ್ ಮುಕ್ತ ಪ್ರಕೃತಿ ನಿರ್ಮಿಸೋಣ, ಕಾಡು ಬೆಳೆಸಿ..ನಾಡು ಉಳಿಸಿ…ಜೀವ ರಕ್ಷಿಸಿ ನಮ್ಮ ಘೋಷವಾಕ್ಯವಾಗಿದ್ದು, ಇದಕ್ಕೆ ಪ್ರತಿಯೊಬ್ಬ ನಾಗರಿಕರು ಕೈಜೋಡಿಸುವಂತೆ ಅವರು ಮನವಿಮಾಡಿಕೊಂಡರು.ಸುದ್ದಿಗೋಷ್ಠಿಯಲ್ಲಿ ಪ್ರಕೃತಿ ಬೆಳಕು ಸಂಘದ ಅಧ್ಯಕ್ಷ ಜೀವನ್ ಪಾವ್ಲ್ ಡಿಕುನ್ಹಾ, ಸದಸ್ಯ ಅಮಾನುಲ್ಲಾ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *