ಬಂಟ್ವಾಳ :ವಿದ್ಯಾರ್ಥಿಗಳು ಸಮಯದ ಸದುಪಯೋಗ ಮಾಡಿಕೊಂಡು ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ವಿಶೇಷ ಸಾಮಥ್ಯವಿದ್ದು ಅದಕ್ಕೆ ಸೂಕ್ತ ಮಾರ್ಗದರ್ಶನದ ಅವಶ್ಯಕತೆ ಇದೆ. ಹೆತ್ತವರು ವಿದ್ಯಾರ್ಥಿಗಳ ಕಲಿಕೆ ಹಾಗೂ ಚಲನ ವಲನಗಳ ಬಗ್ಗೆ ಗಮನ ಹರಿಸಿ ವಿದ್ಯಾರ್ಥಿಗಳ ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಮಂಗಳೂರು ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕಿ ಹಾಗೂ ಜೆಸಿರೆಟ್ ವಿಭಾಗದ ಅಧ್ಯಕ್ಷೆ ಅಮಿತಾ ಹರ್ಷರಾಜ್ ಹೇಳಿದರು.

sajipa school image
ಅವರು ಸರಕಾರಿ ಪದವಿ ಪೂರ್ವ ಕಾಲೇಜು ಸಜಿಪಮೂಡದಲ್ಲಿ ಜೆಸಿಐ ಜೋಡುಮಾರ್ಗ ನೇತ್ರಾವತಿ ಸಹಯೋಗದಲ್ಲಿ ಏರ್ಪಡಿಸಲಾದ ಅಧ್ಯಯನ ತಂತ್ರ ಮತ್ತು ಪರೀಕ್ಷಾ ಸಿದ್ಧತೆಯ ಕುರಿತು ಕಲಿಕಾಪ್ರೇರಣಾ ತರಬೇತಿ ಶಿಬಿರದಲ್ಲಿ ಜು.17 ರಂದು ಮುಖ್ಯ ಅತಿಥಿಯಾಗಿ ಮಾತನಾಡಿದರು.
ಜೆಸಿಐ ರಾಜ್ಯ ತರಬೇತುದಾರ,ಪತ್ರಕರ್ತ ಜಯಾನಂದ ಪೆರಾಜೆ ಮುಖ್ಯ ತರಬೇತುದಾರರಾಗಿ ಮಾತಮಾಡಿ ವಿದ್ಯಾರ್ಥಿಗಳು ಆತ್ಮ ವಿಶ್ವಾಸದಿಂದ ಅಧ್ಯಯನ ಮಾಡಿ ಕಲಿಕಾ ಸಾಮಥ್ರ್ಯವನ್ನು ಹೆಚ್ಚಿಸಿಕೊಳ್ಳಬೇಕು. ಇಂದಿನ ಸ್ಪಧಾತ್ಮಕ ಯುಗದಲ್ಲಿ ನಿರಂತರ ಅಭ್ಯಾಸದಿಂದ ಮಾತ್ರ ಹೆಚ್ಚು ಅಂಕಗಳನ್ನು ಗಳಿಸಲು ಸಾಧ್ಯವಿದೆ ಎಂದರು.
ಜೆಸಿಐ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷ ಹರ್ಷರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷತೆ ವಹಿಸಿಮಾತನಾಡಿ, ಜೆಸಿಐ ಸಂಸ್ಥೆಯು ವ್ಯಕ್ತಿತ್ವ ವಿಕಸನ ತರಬೇತಿಯ ಮೂಲಕ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಸಹಕರಿಸುತ್ತಿದೆ ಎಂದರು.
ಕಾಲೇಜಿನ ಉಪಪ್ರಾಂಶುಪಾಲರಾದ ಜಯಲಕ್ಷ್ಮೀ ಪಿ.ಎನ್. ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಹೆಚ್ಚಿಸಕೊಳ್ಳುವುದಕ್ಕೆ ತರಬೇತಿ ಅವಶ್ಯಕತೆ ಇದೆ ಎಂದರು.
ವಿಜ್ಞಾನ ಶಿಕ್ಷಕ ವೆಂಕಟ್ರಮಣ ಅತಿಥಿಗಳನ್ನು ಸ್ವಾಗತಿಸಿ ಶಾಲಾ ಚಟುವಟಿಕೆಗಳ ಮಾಹಿತಿ ನೀಡಿದರು. ಗಣಿತ ಶಿಕ್ಷಕ ಗಣೇಶ್ ವಂದನಾರ್ಪಣೆಮಾಡಿದರು.

By Suddi9

Leave a Reply

Your email address will not be published. Required fields are marked *