ಕೋಲಾರ: ಕೋಲಾರ ಜಿಲ್ಲೆಯ ಕಾರ್ಯನಿರತ ಪತ್ರಕರ್ತರಿಗೆ ಸಹಕಾರಿ ಚಳುವಳಿಯ ಅಭಿವೃದ್ಧಿಗೆ ದಿನಪತ್ರಿಕೆ/ಮಾಧ್ಯಮದ ಪಾತ್ರ ಕುರಿತು ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರವನ್ನು ನಗರದ ಪತ್ರಕರ್ತರ ಭವನದಲ್ಲಿ ಜು, 20ರ ಶನಿವಾರ ಬೆಳಗ್ಗೆ 10-00 ಗಂಟೆಗೆ ಹಮ್ಮಿಕೊಳ್ಳಲಾಗಿದೆ.ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ. ಬೆಂಗಳೂರು, ಕೋಲಾರ ಜಿಲ್ಲಾ ಸಹಕಾರ ಒಕ್ಕೂಟ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿದೋದ್ದೇಶ ಸಹಕಾರ ಸಂಘ, ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕೋಲಾರ, ಸಹಕಾರ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.pressmeet photos (2)
ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಕಾರ್ಯಾಗಾರವನ್ನು ಉದ್ಘಾಟಿಸುವರು. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್ ಗಣೇಶ್ ಅಧ್ಯಕ್ಷತೆ ವಹಿಸುವರು.ಸಹಕಾರ ಚಳುವಳಿಯ ಅಭಿವೃದ್ಧಿಗೆ ದಿನಪತ್ರಿಕೆ ಹಾಗೂ ಮಾಧ್ಯಮದ ಪಾತ್ರ ಕುರಿತು ಬೆಂಗಳೂರು ಉದಯವಾಣಿ ದಿನಪತ್ರಿಕೆಯ ಹಿರಿಯ ಪತ್ರಕರ್ತ ಎ.ಎಂ.ಸುರೇಶ್ ಉಪನ್ಯಾಸ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೋಲಾರ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಂ.ವೆಂಕಟಸ್ವಾಮಿ, ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಭೂ ಬ್ಯಾಂಕ್ ನಿರ್ದೇಶಕ ಯಲವಾರ ಸೊಣ್ಣೇಗೌಡ, ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಕೋಲಾರ ಚಿಕ್ಕಬಳ್ಳಾಪುರ ಬ್ಯೂರೋ ಮುಖ್ಯಸ್ಥ ಬಿ.ವಿ ಗೋಪಿನಾಥ್, ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿ.ಮುನಿರಾಜು, ಕೋಲಾರ ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ಎಂ.ಕೃಷ್ಣೇಗೌಡ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿದೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷ ಕೋ.ನಾ ಮಂಜುನಾಥ್, ಸಹಕಾರ ಒಕ್ಕೂಟದ ನಿರ್ದೇಶಕರಾದ ಪಿ.ಎನ್ ಕೃಷ್ಣಾರೆಡ್ಡಿ, ಕೆ.ಎಂ.ವೆಂಕಟೇಶಪ್ಪ, ಪೆಮ್ಮಶೆಟ್ಟಿಹಳ್ಳಿ ಎಸ್.ಸುರೇಶ್, ಹೆಚ್.ಕೃಷ್ಣಪ್ಪ, ಕೆ.ವಿ ನಾರಾಯಣಸ್ವಾಮಿ, ಭಾಸ್ಕರ್, ಉರಿಗಿಲಿ ಎಸ್.ಆರ್ ರುದ್ರಸ್ವಾಮಿ, ಅರಹಳ್ಳಿ ಜಿ.ಅಶ್ವಥನಾರಾಯಣ, ಸಹಕಾರ ಸಂಘಗಳ ಉಪನಿಬಂಧಕ ಬಿ.ಜಯಪ್ರಕಾಶ್, ಸಹಾಯಕ ನಿಬಂಧಕ ಸಿ.ವಿ ನಾಗರಾಜಗೌಡ ಉಪಸ್ಥಿತರಿರುವರು.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿದೋದ್ದೇಶ ಸಹಕಾರ ಸಂಘ ಎಲ್ಲಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ಅಧ್ಯಕ್ಷ ಕೆ.ಎಸ್ ಗಣೇಶ್ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *