ಬಂಟ್ವಾಳ ;  ಬಂಟ್ವಾಳ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರತಿಯೊಂದು ಅಭಿವೃದ್ದಿ ವಿಚಾರದಲ್ಲಿ ವಿಶೇಷ ಗಮನ ನೀಡಿದ್ದಲ್ಲದೆ, ಶಕ್ತಿಮೀರಿ ಜನರ ಸೇವೆ ಮಾಡಿದರೂ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲುಂಟಾಗಿರುವುದು ಅತ್ಯಂತ ವಿಷಾದನೀಯ, ಸೋಲನ್ನು ಸವಾಲಾಗಿ ಸ್ವೀಕರಿಸಿ ಮತ್ತೆ ಪಕ್ಷ ಗತ ವೈಭವಕ್ಕೆ ಮರಳುವಂತೆ ಮಾಡಲು ಕಾರ್ಯಕರ್ತರು ಶ್ರಮಿಸಬೇಕಾಗಿದೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಕರೆ ನೀಡಿದರು. ಸಜೀಪಮುನ್ನೂರುಗ್ರಾಮದ    ಕಂದೂರಿನ  ಗೌರಿ ಗಣೇಶ್ ಸಭಾಭವನದಲ್ಲಿ  ನಡೆದ ಸಜಿಪಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಚುನಾಯಿತ ಜನಪ್ರತಿನಿಧಿಗಳ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಪಂಚಾಯತ್ ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
Milana 2
 ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ ಅಧ್ಯಕ್ಷತೆ ವಹಿಸಿದ್ದರು. ಜಿ ಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾ ಪಂ ಉಪಾಧ್ಯಕ್ಷ ಬಿ .ಎಂ ಅಬ್ಬಾಸ್ ಅಲಿ, ಸದಸ್ಯೆ ನಸೀಮಾ ಬೇಗಂ, ಸಜಿಪಮುನ್ನೂರು ಗ್ರಾಪಂ ಅಧ್ಯಕ್ಷ ಮುಹಮ್ಮದ್ ಶರೀಫ್, ಪ್ರಮುಖರಾದ ಪರಮೇಶ್ವರ ಎಂ., ಶರೀಫ್ ಆಲಾಡಿ, ಹರೀಶ್ ಗಟ್ಟಿ ಮಾರ್ನಬೈಲು, ಎನ್. ದೇವರಾಯರ್ ಬೊಕ್ಕಸ, ಬಶೀರ್ ನಂದಾವರ, ಆರಿಫ್ ನಂದಾವರ, ಅಝೀಝ್ ಕೊಪ್ಪಳ, ಧನಂಜಯ ಶೆಟ್ಟಿ ಪರಾರಿ, ಇಕ್ಬಾಲ್ ಮಲಾಯಿಬೆಟ್ಟು, ಹೇಮಾವತಿ, ಜನಾರ್ದನ ಮಾರ್ನಬೈಲು, ಫಾತಿಮಾ ಝೊಹರಾ, ಕರೀಂ ನಂದಾವರ, ಇಬ್ರಾಹಿಂ ಮಲಾಯಿಬೆಟ್ಟು, ಬದ್ರುದ್ದೀನ್ ಮುನ್ನೂರು ಮೊದಲಾದವರು ಭಾಗವಹಿಸಿದ್ದರು.
Milana 1
ಸಜಿಪಮುನ್ನೂರು ಗ್ರಾ ಪಂ ಸದಸ್ಯರಾದ ಯೂಸುಪ್ ಕರಂದಾಡಿ ಸ್ವಾಗತಿಸಿ, ಅಹ್ಮದ್ ಕಬೀರ್ ಆಲಾಡಿ ವಂದಿಸಿದರು.
 ಯೂಸುಫ್ ಮರು ಆಯ್ಕೆ:
ಇದೇ ವೇಳೆ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಸಜಿಪಮುನ್ನೂರು ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಗ್ರಾ ಪಂ ಸದಸ್ಯ ಯೂಸುಫ್ ಕರಂದಾಡಿ ಅವರನ್ನು ಮುಂದಿನ ಅವಧಿಗೆ ಮತ್ತೆ ಸರ್ವಾನುಮತದಿಂದ ಮರು ಆಯ್ಕೆಗೊಳಿಸಲಾಯಿತು.

By Suddi9

Leave a Reply

Your email address will not be published. Required fields are marked *