ವಿಟ್ಲ: ದ ಕ ಜಿಲ್ಲಾ ದಲಿತ್ ಸೇವಾ ಸಮಿತಿ ವತಿಯಿಂದ ಸಾಲೆತ್ತೂರು ವಿಟ್ಲ ಮಾರ್ಗದ ನಾಡಕಛೇರಿ, ನಿರೀಕ್ಷಣಾ ಮಂದಿರದ ಬಳಿಯ ವೃತ್ತಕ್ಕೆ ಅಂಬೇಡ್ಕರ್ ವೃತ್ತ ಎಂದು ನಾಮಕರಣ ಮಾಡ ಬೇಕೆಂದು ಪಟ್ಟಣ ಪಂಚಾಯತ್ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾಧ್ಯಕ್ಷ ಬಿ ಕೆ ಸೇಸಪ್ಪ ಬೆದ್ರಕಾಡು, ಕಾರ್ಯದರ್ಶಿ ಚಂದ್ರಶೇಖರ ಯು, ಸಂಚಾಲಕ ಗೋಪಾಲ್ ನೇರಳಕಟ್ಟೆ, ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ಗಣೇಶ್ ಸೀಗೆಬಲ್ಲೆ ಮತ್ತು ಕಾರ್ಯದರ್ಶಿ ಪ್ರಸಾದ್ ಅನಂತಾಡಿ ಉಪಸ್ಥಿತರಿದ್ದರು.
