ಮಂಗಳೂರು: ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 2 ಕೋ.ರೂ. ಮೌಲ್ಯದ 5 ಕೆ.ಜಿ. ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಕಾರ್ಗೋ ಕಾಂಪ್ಲೆಕ್ಸ್‌ನಲ್ಲಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಕಂಪನಿಯೊಂದರ ನಿರ್ದೇಶಕ ಸಹಿತ ಇಬ್ಬರನ್ನು ಡಿಆರ್ ಐ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತರನ್ನು ಉಡುಪಿಯ ಸ್ವರೂಪ್ ಮಿನರಲ್ ರಿಸೋರ್ಸಸ್ ಕಂಪನಿಯ ನಿರ್ದೇಶಕ ಮನೋಹರ್ ಕುಮಾರ್ ಪೂಜಾರಿ ಮತ್ತು ಮಂಗಳೂರಿನ ಅಶೋಕನಗರ ನಿವಾಸಿ ಲೋಹಿತ್ ಶ್ರೀಯಾನ್ ಎಂದು ಗುರುತಿಸಲಾಗಿದೆ. ಆರೋಪಿ ಮನೋಹರ್ ಕುಮಾರ್‌ನನ್ನು ಬೆಂಗಳೂರಿನಲ್ಲಿ ಬಂಧಿಸಿದರೆ, ಲೋಹಿತ್‌ನನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಬೆಂಗಳೂರು ಮತ್ತು ಮಂಗಳೂರು ಡಿಆರ್‌ಐ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

