ಬಂಟ್ವಾಳ: ಕಲ್ಲಡ್ಕ  ಶ್ರೀರಾಮ ಪದವಿ ಕಾಲೇಜಿನ ದಶಮಾನೋತ್ಸವದ ಪ್ರಯುಕ್ತ ಪ್ರಭವ ವಿಜ್ಞಾನ ಸಂಘ ಮತ್ತು ಪ್ರಸಾದ್ ನೇತ್ರಾಲಯ, ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಒಂದು ವಾರದ ಕಾಲ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.

IMG-20200108-WA0009
ಶ್ರೀರಾಮ ವಿದ್ಯಾಕೇಂದ್ರ ಪ್ರತೀ ವರ್ಷ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಸಂಸ್ಥೆಯು ಸಂಸ್ಕಾರಯುತವಾದ ವಿದ್ಯಾದಾನದ ಜೊತೆಗೆ ಸಮಾಜದ ಹಿತವನ್ನು ಕಾಪಾಡುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಈ ಶಿಬಿರದಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಒಟ್ಟು 3,556 ಜನ ಇದರ ಸದುಪಯೋಗವನ್ನು ಪಡೆದುಕೊಂಡಿರುತ್ತಾರೆ. 30೦ಕ್ಕೂ ಹೆಚ್ಚಿನವರಿಗೆ ಕನ್ನಡಕ, 33 ಮಂದಿಗೆ ಶಸ್ತ್ರಚಿಕಿತ್ಸೆ ಹಾಗೂ 186 ಮಂದಿಗೆ ವಿಶೇಷ ಚಿಕಿತ್ಸೆ ನೀಡಲು ಪ್ರಸಾದ್ ನೇತ್ರಾಲಯ ಸಿದ್ಧತೆ ನಡೆಸಿದೆ.

ಪ್ರಸಾದ್ ನೇತ್ರಾಲಯದ ಒಬ್ಬ ವೈದ್ಯಾಧಿಕಾರಿ, 7 ಜನ ಸಹಾಯಕ ಸಿಬ್ಬಂದಿ, ಪಿಆರ್‌ಒ ಮಧುಕರ್ ಈ ಶಿಬಿರದ ವ್ಯವಸ್ಥೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಪ್ರಸಾದ್ ನೇತ್ರಾಲಯದ ಸಂಸ್ಥಾಪಕ ಡಾ. ಕೃಷ್ಣಪ್ರಸಾದ್ ಅವರು ಸಲಹೆ, ಮಾರ್ಗದರ್ಶನ ನೀಡಿದರು.

By Suddi9

Leave a Reply

Your email address will not be published. Required fields are marked *