ಕೆಜಿಎ :ಭಾರತರತ್ನ, ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ರವರ 129ನೇ ಜನ್ಮದಿನಾಚರಣೆಯನ್ನು ಕೆಜಿಎಫ್‍ನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಮಂಗಳವಾರದಂದು ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ ಅವರು ಡಾ|| ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು. ಡಾ|| ಅಂಬೇಡ್ಕರ್ ಅವರ ಆದರ್ಶ, ತತ್ವಗಳನ್ನು ಇಂದಿನ ಸಮಾಜದಲ್ಲಿ ಅಳವಡಿಸಿಕೊಂಡು ಮುನ್ನಡೆಯುವಂತೆ ಕರೆ ನೀಡಿದರು.

???????????????????????????????
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ ಅವರ ಅಧ್ಯಕ್ಷತೆಯಲ್ಲಿ ನಡೆದ ಡಾ|| ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಬಿ.ಕೆ. ಉಮೇಶ್, ಸಹಾಯಕ ಆಡಳಿತಾಧಿಕಾರಿ ಜಿ. ವಿಶ್ವನಾಥ, ಪೊಲೀಸ್ ಇನ್ಸ್‍ಪೆಕ್ಟರ್‍ಗಳಾದ ಶಿವರಾಜ್ ಮುಧೋಳ್, ಚಂದ್ರಶೇಖರ್ ಹಾಗೂ ಇಲ್ಲಿನ ಪಿಎಸ್‍ಐ ಮತ್ತು ಸಿಬ್ಬಂದಿಗಳು ಹಾಜರಿದ್ದರು.
ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿದ್ದರು.

By Suddi9

Leave a Reply

Your email address will not be published. Required fields are marked *