ಬಂಟ್ವಾಳ: ಬೋಳಿಯಾರು ಗ್ರಾಮದ ಧರ್ಮನಗರ ಸಮೀಪದ ಜಲಕದಕಟ್ಟೆ ಎಂಬಲ್ಲಿನ ನೇತ್ರಾವತಿ ನದಿಯಲ್ಲಿ ಮುಳುಗಿ ಬಾಲಕನೊಬ್ಬ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.ಕೊಣಾಜೆ ಸಮೀಪದ ನಡುಪದವು ನಿವಾಸಿ ಫಾಝಿಲ್ (15) ಮೃತಪಟ್ಟ ಬಾಲಕ.IMG-20200620-WA0072

ಈತ ಇಲ್ಲಿನ ತೋಟವೊಂದರ ಕೆಲಸಕ್ಕೆ ಸ್ನೇಹಿತರ ಜೊತೆಗೂಡಿ ತೆರಳಿದ್ದ ಎನ್ನಲಾಗಿದೆ. ತೋಟದಲ್ಲಿ ತೆಂಗಿನಕಾಯಿ ಹೆಕ್ಕಿದ ಬಳಿಕ ತೋಟದ ಪಕ್ಕವೇ ಹರಿಯುವ ನದಿ ಕಿನಾರೆಯ ಬಳಿ ತೆರಳಿ ಕೈಕಾಲು ತೊಳೆಯಲು ಮುಂದಾಗಿದ್ದ. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಮಧ್ಯಾಹ್ನದ ವೇಳೆ  ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಕೊಣಾಜೆ ಪೊಲೀಸರು ಕೇಸು ದಾಖಲಿಸಿದ್ದಾರೆ.

By Suddi9

Leave a Reply

Your email address will not be published. Required fields are marked *