ಬಂಟ್ವಾಳ :  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಆಶ್ರಯದಲ್ಲಿ ಬಿ.ಸಿ‌.ರೋಡ್ ವಲಯದ ಬಡಗಬೆಳ್ಳೂರುವಿನ  ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ವಠಾರದಲ್ಲಿ ಪರಿಸರ ಜಾಗೃತಿ ಮತ್ತು ಸಸಿ ವಿತರಣೆ ಕಾರ್ಯಕ್ರಮ ಭಾನುವಾರ ನಡೆಯಿತು. ಶ್ರೀ.ಧ.ಗ್ರಾ.ಯೋ.ಯ ಬಂಟ್ವಾಳ ತಾಲೂಕು ಘಕದ  ಯೋಜನಾಧಿಕಾರಿ ಜಯಾನಂದ ಪಿ.ಅವರು ಕಾರ್ಯಕ್ರಮ ಉದ್ಘಾಟಿಸಿ ಬಡಗಬೆಳ್ಳೂರು ಗ್ರಾಮದಲ್ಲಿ ಪ್ರತಿವರ್ಷ ಹತ್ತು ಸಾವಿರ ಗಿಡಗಳ ನಾಟಿ ಮಾಡಲು ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.IMG-20200621-WA0065

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿದ್ದ ಬಡಗಬೆಳ್ಳೂರು ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಸಂಕಪ್ಪಶೆಟ್ಟಿ ಪರಿಸರ ಸಂರಕ್ಷಣೆ ಹಾಗೂ ಪರಿಸರಮಾಲಿನ್ಯದ ಬಗ್ಗೆ ಮಾಹಿತಿಯನ್ನು ನೀಡಿದರು
ಸ್ಥಳೀಯ ಪಂಚಾಯತ್ ಅಧ್ಯಕ್ಷೆ ಜಯಂತಿ, ವಲಯ ಅಧ್ಯಕ್ಷರಾದ ಶೇಖರ್ ಸಾಮನಿ, ಬಂಟ್ವಾಳ ತಾಲೂಕಿನ ಕೃಷಿ ಅಧಿಕಾರಿ ಜನಾರ್ಧನ್,ಬಿ.ಸಿ.ರೋಡು ವಲಯದ ಮೇಲ್ವಿಚಾರಕರಾದ ಕೇಶವ ಆದಿಶಕ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸಂದೀಪ್ ರವರು ವೇದಿಕೆಯಲ್ಲಿದ್ದರು. ರೂಪ ಶ್ರೀ ಅವರು ಸ್ವಾಗತಿಸಿದರು. ಸರಿತಾ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *