ಬಂಟ್ವಾಳ: ತಾಲೂಕಿನ ಕೊಳ್ನಾಡು ಗ್ರಾಮದ ಬೊಳ್ಪಾದೆ ಎಂಬಲ್ಲಿ ಖಾಸಗಿ ಹಾಗೂ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರಳು ದಾಸ್ತನಿಟ್ಟಿರುವುದನ್ನು ಶನಿವಾರ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ತಂಡ ಪತ್ತೆ ಹಚ್ಚಿದೆ.ಖಚಿತ ವರ್ತಮಾನದ ಮೇರೆಗೆ ತಹಶೀಲ್ದಾರ್ ರಶ್ಮಿ. ಎಸ್. ಆರ್ , ಗಣಿ ಇಲಾಖೆಯ ನಿರ್ದೇಶಕಿ ಸುಷ್ಮಾ ರವರು ಜಂಟಿ ದಾಳಿ ಕಾರ್ಯಾಚರಣೆ ನಡೆಸಿ ಸುಮಾರು ೫೦ ಲೋಡ್ ಮರಳನ್ನು ಜಪ್ತಿ ಮಾಡಿ ಮುಂದಿನ ಕ್ರಮ ಕೈ ಗೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ, ಗ್ರಾಮ ಲೆಕ್ಕಾಧಿಕಾರಿ ಅನಿಲ್ ಕುಮಾರ್, ಸಿಬ್ಬಂದಿ ಮಹಾಬಲ ಕೊಳ್ನಾಡು ಮತ್ತಿತರರು ಭಾಗವಹಿಸಿದ್ದರು.
