ಬಂಟ್ವಾಳ: ಪುದು ಗ್ರಾಮದ ಫರಂಗಿಪೇಟೆ ಜುಮಾ ಮಸೀದಿಯ ಅಧ್ಯಕ್ಷ, ಸಾಮಾಜಿಕ, ರಾಜಕೀಯ, ಧಾರ್ಮಿಕ ಮುಖಂಡ ಮುಹಮ್ಮದ್ ಬಾವ (72) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ.

ಫರಂಗಿಪೇಟೆ ಜುಮಾ ಮಸೀದಿಯ ಅಧ್ಯಕ್ಷರಾಗಿ 25ಕ್ಕೂ ಅಧಿಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಅವರು ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದರು.

IMG-20200711-WA0017ಕಿದ್ಮತ್ತುಲ್ ಇಸ್ಲಾಮ್ ಅಸೋಸಿಯೇಷನ್ ಫರಂಗಿಪೇಟೆ ಇದರ ಮುಂದಾಳತ್ವ ವಹಿಸಿದ್ದ ಮುಹಮ್ಮದ್ ಬಾವಾ ಅವರು ಈ ಸಂಘಟನೆಯ ಮೂಲಕ ಪ್ರತೀ ವರ್ಷ 10 ಜೋಡಿ ಬಡ ಹೆಣ್ಣು ಮಕ್ಕಳ ಸಾಮೂಹಿಕ ವಿವಾಹ ನಡೆಸಲಾಗುತ್ತಿದೆ‌.ಪುದು ಗ್ರಾಮ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಸ್ಥಳೀಯವಾಗಿ ಜನಾನುರಾಗಿದ್ದರು.ಮೃತರು ಪತ್ನಿ, ನಾಲ್ವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಸಂತಾಪ: ಫರಂಗಿಪೇಟೆ ಜುಮ್ಮಾ ಮಸೀದಿಯ ಅಧ್ಯಕ್ಷ ಎಫ್. ಮಹಮ್ಮದ್ ಯಾನೆ ಬಾವಕರವರ ನಿಧನಕ್ಕೆ ಶಾಸಕ ಯು.ಟಿ.ಖಾದರ್, ಪರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣಕುಮಾರ್ ಪೂಂಜ,ತಾರನಾಥ ಕೊಟ್ಟಾರಿ,ಜಿಪಂಸದಸ್ಯ ರವೀಂದ್ರಕಂಬಳಿ ತೀವ್ರ ಶೋಕ ವ್ಯಕ್ತಪಡಿಸಿದ್ದು ಬಾವಕರವರು ಸರ್ವಧರ್ಮದವರೊಂದಿಗೆ ಅನ್ಯೋನರಾಗಿದ್ದು ˌ ಅವರು ಶಿಕ್ಷಣ ಪ್ರೇಮಿಯಾಗಿದ್ದರು ಎಂದು ಹೇಳಿದ್ದಾರೆ.

By Suddi9

Leave a Reply

Your email address will not be published. Required fields are marked *