ಬಂಟ್ವಾಳ: ತಾಲೂಕಿನ ಸಿದ್ಧಕಟ್ಟೆ ಗುಣಶ್ರೀ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾದ ಒಟ್ಟು 23 ಮಂದಿ ವಿದ್ಯಾರ್ಥಿಗಳ ಪೈಕಿ ಇಬ್ಬರು ಡಿಸ್ಟಿಂಕ್ಷನ್ ಮತ್ತು 14 ಮಂದಿ ಪ್ರಥಮ ಶ್ರೇಣಿ ಸಹಿತ ಎಲ್ಲರೂ ತೇರ್ಗಡೆಯಾಗುವ ಮೂಲಕ ಶೇ 100 ಫಲಿತಾಂಶ ದಾಖಲಿಸಿದ್ದಾರೆ.
ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ವಿದ್ಯಾರ್ಥಿನಿ ಕೃತಿ ಎಚ್.ಶೆಟ್ಟಿ-543 ಮತ್ತು ಶ್ರೀಶ-537 ಅಂಕ ಗಳಿಸಿ ಡಿಸ್ಟಿಂಕ್ಷನ್ ಸಾಧನೆ ಗಳಿಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ಸಂತೋಷ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
