ಬಂಟ್ವಾಳ: ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಜ.30 ರಂದು ಶನಿವಾರ ಗೊನೆ ಕಡಿದು, ಫೆ.5 ರ ಶುಕ್ರವಾರ ರಾತ್ರಿ 9 ಗಂಟೆಗೆ ಭಂಡಾರಯೇರಿ, ಫೆ.6 ರ ಶನಿವಾರ ಬೆಳಿಗ್ಗೆ 9 ಗಂಟೆಗೆ ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ನಡೆಯಿತು.
ಮತ್ತು ಸಂಜೆ 4 ರಿಂದ ಶ್ರಿ ಗುಡ್ಡೆ ಚಾಮುಂಡಿ- ಪಂಜುರ್ಲಿ ದೈವಗಳ ನೇಮ ನಡೆಯಿತು. ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ ಸಹಿತ ಅನೇಕರು ಆಗಮಿಸಿ ದೈವದ ಗಂಧ ಪ್ರಸಾದ ಸ್ವೀಕರಿಸಿದರು.ಆಡಳಿತ ಮೋಕ್ತೇಸರ ಮಾಣಿ ಗುತ್ತು ಸಚಿನ ರೈ ಸಹಿತ ಎಲ್ಲಾ ಗುತ್ತಿನ ಪ್ರಮುಖರು ಉಪಸ್ಥಿತರಿದ್ದರು.
